Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಜೂನ್ 03 
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ.
ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಚಿತವಾಗಿ ಕಣ್ತುಂಬಿಕೊಳ್ಳಬಹುದಾಗಿದೆ.
ಲೋಕ ಭವನದಲ್ಲಿ ನಡೆಯಲಿರುವ ಈ ಅದ್ಧೂರಿ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಡೀ ರಾಜ್ಯದ ಕಣ್ಣು ಇಂದು ಸಂಜೆ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳತ್ತ ನೆಡಲಿವೆ
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ