ಬಳ್ಳಾರಿ,ಆ.11
ಜಿಲ್ಲಾ ಕೇಂದ್ರದಲ್ಲಿ ಆ.20 ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬAಧ ಚರ್ಚಿಸಲು ಆಗಸ್ಟ್ 12 ರಂದು ಸಂಜೆ 04 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
