Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್ -2025" ------- ಜಿಲ್ಲೆಯಲ್ಲಿ ಒಲಂಪಿಕ್ ಓಟದ ರ‌್ಯಾಲಿಗೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು





ಬೆಳಗಾವಿ, ಜೂ.22(: ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ (ಜೂ.22) ನಗರದ ಕೋಟೆ ಆವರಣದಲ್ಲಿ "ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025" ಓಟದ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಫೀಬಾ ಏಷ್ಯಾ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜ್ ರಾಜು ಅವರು ಚಾಲನೆ ನೀಡಿದರು.



ಈ ವೇಳೆ ಮಾತನಾಡಿದ ಅವರು ಅಂತಾರಾಷ್ಟ್ರೀಯ ಒಲಂಪಿಕ್ ಡೇ ಅಂಗವಾಗಿ ವಿಶ್ವದಾದ್ಯಂತ ಓಟವನ್ನು ಆಯೋಜಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಓಟದಲ್ಲಿ ಸಾರ್ವಜನಿಕರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕ್ರೀಡಾ ಪಟುಗಳು

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.



ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ಆಚರಿಸುವ ಮೂಲಕ ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಜೊತೆಗೆ ನಾಯಕತ್ವ ಗುಣ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು.



"ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025" ಓಟದ ರ‌್ಯಾಲಿ ಕೋಟೆ ಆವರಣದಿಂದ ಆರಂಭಗೊಂಡು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕೃಷ್ಣ ದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ತಲುಪಿತು.



ಒಲಿಂಪಿಕ್ ಡೇ ಓಟದಲ್ಲಿ ವಿವಿಧ ಶಾಲೆ/ಕಾಲೇಜು/ವಸತಿ ನಿಲಯ/ವಿಶ್ವವಿದ್ಯಾಲಯಗಳಿಂದ ಸುಮಾರು 3500 ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.



ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಮಹಾಕಾರ್ಯದರ್ಶಿ ಟಿ. ಅನಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಯುವ ಮುಖಂಡರಾದ ಸರ್ವೋತ್ತಮ ಜಾರಕಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ