Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿಯಾಗಿ ಜಾರಿಯಾಗಲಿ - ಡಾ.ಕೆ.ಟಿ.ತಿಪ್ಪೇಸ್ವಾಮಿ

ಚಿತ್ರದುರ್ಗಡಿ.24:

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಸೋಮವಾರ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾದ ‘ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಮಕ್ಕಳ ರಕ್ಷಣಾ ನೀತಿಯಲ್ಲಿ ಮಕ್ಕಳಿಗೆ ಒದಗಿಸಬೇಕಾದ ಮೂಲ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಇವುಗಳನ್ನು ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನಿಷ್ಟಾನ ಮಾಡಬೇಕು. ಶಾಲೆಗಳು ಕೇವಲ ಶಿಕ್ಷಣ ಕೊಡುವ ಕೇಂದ್ರಗಳಾಗದೆ, ರಕ್ಷಣೆಯನ್ನೂ ಒದಗಿಸಬೇಕಾದ ತುರ್ತು ಅಗತ್ಯವಿದೆ. ಶಾಲೆಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಮಕ್ಕಳ ರಕ್ಷಣಾ ನೀತಿ ಕಟ್ಟುನಿಟ್ಟಾಗಿ ಶಾಲೆಗಳಲ್ಲಿ ಅನುಷ್ಠಾನವಾಗಬೇಕು ಎಂದು ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ಇದೇ ಸಂದಭದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009ರ ಅನ್ವಯ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನಾ ಕುರಿತು ತರಬೇತಿ ನೀಡಲಾಯಿತು.

ಚಿತ್ರದುರ್ಗ ಉಪವಿಭಾಗದ ಡಿವೈಎಸ್ಪಿ ಪಿ.ಕೆ.ದಿನಕರ್ ಅವರು ಶಾಲೆಯಲ್ಲಿನ ಮಕ್ಕಳ ಸುರಕ್ಷತೆ ಹಾಗೂ ತೆರೆದ ಮನೆ ಕಾರ್ಯಕ್ರಮದ ಬಗ್ಗೆ ಹಾಗೂ ಶಿಕ್ಷಕ ಸಿ.ಎಲ್.ಏಕನಾಥ್ ಅವರು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಓ.ಪವಿತ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಸೇರಿದಂತೆ, ಶಿಕ್ಷಣ ಇಲಾಖೆ ಅಧಿಕಾರಿಗಳು, ಅಕ್ಷರ ದಾಸೋಹ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ