Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

----
ಕೊಪ್ಪಳ ಜುಲೈ 07): ಹಸಿರು ಕ್ರಾಂತಿಯ ಹರಿಕಾರರು ಹಾಗೂ ಮಾಜಿ ಉಪಪ್ರಧಾನ ಮಂತ್ರಿಗಳಾದ ದಿ. ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದಿಂದ ಸೋಮವಾರದಂದು ಗೌರವ ಸಮರ್ಪಣೆ ಮಾಡಲಾಯಿತು.
ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಮಹನೀಯರ (ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಡಾ. ಬಾಬು ಜಗಜೀವನ ರಾಂ) ಪುತ್ಥಳಿಗೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ ಅವರು ಸೇರಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ, ಕೊಪ್ಪಳ ತಹಶಿಲ್ದಾರರಾದ ಬಸವರಾಜ ತನ್ನಳ್ಳಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ - ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ: ಕೊಪ್ಪಳ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ: ರಾಜ್ಯಕ್ಕೆ ಅಪಾರ ನಷ್ಟಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ