Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬರ ಮುನ್ಸೂಚನೆ; ಯಲಬುರ್ಗಾ, ಕುಕನೂರು ತಾಲ್ಲೂಕಿನಲ್ಲಿ ಕ್ರೀಯಾಯೋಜನೆ ರೂಪಿಸಲು ಶಾಸಕರ ಸೂಚನೆ

----
ಕೊಪ್ಪಳ ಜುಲೈ 04 ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳ ವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ ಅಗತ್ಯ ಕ್ರೀಯಾಯೋಜನೆ ರೂಪಿಸಬೇಕು ಎಂದು ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಯ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ (ಜು. 3ರಂದು) ಯಲಬುರ್ಗಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಪ್ರಸ್ತುತ ಮಳೆಯ ಕೊರತೆಯಿಂದಾಗಿ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಬೆಳೆ ಹಾನಿ ಎಷ್ಟಾಗಬಹುದು ಎಂಬ ವಿವರವನ್ನು ಹೆಕ್ಟರ್ ವಾರು ಸಂಗ್ರಹಿಸಿ, ಆ ಬೆಳೆ ನಷ್ಟಕ್ಕೆ ಎಷ್ಟು ಕೋಟಿ ರೂಪಾಯಿ ಪರಿಹಾರವನ್ನು ಒದಗಿಸಬೇಕಾಗುತ್ತದೆ. ಇದಕ್ಕೆ ಇನ್ಸೂರೆಸ್ ಎಷ್ಟು ಪಾವತಿಯಾಗಬಹುದು ಎಂಬ ಬೇರೆ ಬೇರೆ ವಿಷಯಗಳನ್ನು ಕ್ರೀಯಾ ಯೋಜನೆಯಲ್ಲಿ ಸೇರಿಸಿ ಸಲ್ಲಿಸಬೇಕೆಂದರು.
ಡಿಬಿಓಟಿ ಯೋಜನೆಗೆ ಸಂಬಂಧಿಸಿದಂತೆ ಮೇಲ್ಮಟ್ಟದ ಜಲಾಗಾರಗಳಲ್ಲಿ ನೀರಿರುತ್ತದೆ. ಆ ನೀರು ಪೈಪ್‌ಲೈನ್ ಮೂಲಕ ಹಳ್ಳಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಇದ್ದಕ್ಕೆ ಕಾರಣ ಜೆಜೆಎಂ ಕಾಮಗಾರಿಗಳು ಸರಿಯಾದ ರೀತಿಯಲ್ಲಿ ಕೈಗೊಳ್ಳದಿರುವುದಾಗಿದೆ. ಹಾಗಾಗಿ ಯಾವ ಯಾವ ಪ್ರದೇಶಗಳಲ್ಲಿ ಜೆಜೆಎಂ ಕಾಮಗಾರಿಗಳು ಕಳಪೆಯಾಗಿವೆ. ಅವುಗಳನ್ನು ಗುರುತಿಸಿ, ಕುಡಿಯುವ ನೀರಿನ ಪೈಪ್‌ಲೈನ್ ಸರಿಪಡಿಸಿ, ಎಲ್ಲಾ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡಬೇಕು. ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳ ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿಗಳ ತಹಶೀಲ್ದಾರರು, ತಾ.ಪಂ ಇಓ.ಗಳು, ಪ.ಪಂ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು, ಇಂಜಿನಿಯರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಬಳ್ಳಾರಿ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ಸೆ.15 ರವರೆಗೆ ‘ಜಾಬ್ ಕಾರ್ಡ್ ಮೇಳ' ಆಯೋಜನೆ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ಕಾಲುಗಳ ಸ್ವಾಧೀನವಿಲ್ಲ… ಆದರೆ ಪರಿಸರ ಕಾಳಜಿಗೆ ಮಿತಿಯಿಲ್ಲ ವೇಮನೂರಿನ ಕಸ ಹೆಕ್ಕಿ, ಕೆರೆ-ನದಿಗಳನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಲು ಜೀವನವನ್ನೇ ಮುಡಿಪಾಗಿಟ್ಟ ‘ಆಪರೇಷನ್‌ ರಾಜಪ್ಪನ್’ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆ