Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.01, 02 ರಂದು ಶಿಕ್ಷಣ ಸಮಾವೇಶ ಕಾರ್ಯಾಗಾರ; ನೋಂದಣಿಗೆ ಆಹ್ವಾನ





ಬಳ್ಳಾರಿ

ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜೆಎಸ್ಡಬ್ಲ್ಯೂ ಫೌಂಡೇಶನ್ ವತಿಯಿಂದ ‘ಎಡುಕಾನ್-2024, ಕೈಜೋಡಿಸಿ ಕಲಿಸೋಣ' ಎಂಬ ವಿಷಯದೊಂದಿಗೆ ಆಗಸ್ಟ್ 01 ಮತ್ತು 02 ರಂದು ತೋರಣಗಲ್ಲಿನ ಜೆಎಸ್ಡಬ್ಲ್ಯೂನ ವಿದ್ಯಾನಗರದ ಜೆ-ಮ್ಯಾಕ್ಸ್ ಹಾಲ್ನಲ್ಲಿ ಶಿಕ್ಷಣ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.

ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗಿದಾರರನ್ನು ಒಗ್ಗೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.

ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಅಥವಾ ವೆಬ್ಸೈಟ್ https://cpikalaburgi.karnataka.gov.in ಇಲ್ಲಿ ನೋಂದಾಯಿಸಿಕೊಳ್ಳಬಹುದು.

ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ತಿಳಿಸಲಾಗುವುದು. ಸೀಮಿತ ಸಾಮಥ್ರ್ಯದ ವಸತಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿಗೆ ಜುಲೈ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ವ್ಯಕ್ತಿಗಳಾದ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಫೌಂಡೇಶನ್ ಸಿಎಸ್ಆರ್ನ ಹಿರಿಯ ವ್ಯವಸ್ಥಾಪಕ ರಾಜಶೇಖರ ರಾಜು ಅವರ ಮೊ.9989833133 ಮತ್ತು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮುಧೋಳ ಅವರ ಮೊ.8310259380 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ