ಸಿರುಗುಪ್ಪ: ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ.98ರಷ್ಟು ಅಂಕ ಗಳಿಸಿ ರಾಜ್ಯಕ್ಕೆ 11ನೇ ಹಾಗೂ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೆಕ್ಕಲಕೋಟೆಯ ಪ್ರತಿಭಾವಂತ ವಿದ್ಯಾರ್ಥಿನಿ ಜಡೆ ಧನಲಕ್ಷ್ಮಿ ಅವರಿಗೆ ವಿಶ್ವಸಿರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ವತಿಯಿಂದ ಉನ್ನತ ವ್ಯಾಸಂಗಕ್ಕೆ ಟ್ಯಾಬ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರಿಯ ಸಂಸ್ಥಾಪಕ ನಿರ್ದೇಶಕ ಹಾಗೂ ಬಣಜಿಗ ಸಮಾಜದ ಜಿಲ್ಲಾಧ್ಯಕ್ಷ ಎಂ.ಡಿ. ಮರಿರಾಜಗೌಡ, ಧನಲಕ್ಷ್ಮಿ ಅವರ ಮುಂದಿನ ವಿದ್ಯಾಭ್ಯಾಸದ ಶೈಕ್ಷಣಿಕ ಶುಲ್ಕವನ್ನು ವಿಶ್ವಸಿರಿ ಸಹಕಾರಿಯ ವತಿಯಿಂದ ಭರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಕಾರಿಯ ನಿರ್ದೇಶಕರಾದ ಅಂಗಡಿ ಎರೆಪ್ಪ, ಚಾಗಿ ಸಿದ್ದಲಿಂಗಪ್ಪ ಹಾಗೂ ಮುಖ್ಯ ಕಾರ್ಯನಿರ್ವಾಹಕ ಎಂ. ವೀರಾರೆಡ್ಡಿ ಉಪಸ್ಥಿತರಿದ್ದರು.
