Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯಾಧಾರಿತ ಕೋರ್ಸುಗಳಿಂದ ಉದ್ಯೋಗ ಸೃಷ್ಠಿ : ಪ್ರೊ.ಎಂ. ಮುನಿರಾಜು


ಬಳ್ಳಾರಿ,ಏ.09



ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಕೋರ್ಸುಗಳನ್ನು ಕಲಿತಲ್ಲಿ ಭವಿಷ್ಯದಲ್ಲಿ ಅವು ಉದ್ಯೋಗ ಸೃಷ್ಟಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ಮುನಿರಾಜು ಅವರು ಹೇಳಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಇನ್ಫೋಸಿಸ್‌ನ ನಾರಾಯಣ ಮೂರ್ತಿ, ಸುಧಾಮೂರ್ತಿ, ಅಂಬಾನಿ, ಅದಾನಿ ಇನ್ನು ಮುಂತಾದ ಸಾಧನೆಗೈದ ವ್ಯಕ್ತಿಗಳ ಬಗ್ಗೆ ತಿಳಿದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್ಗಳನ್ನು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಖ್ಯಾತ ಸಾಹಿತಿಯಾದ ಪ್ರೊ. ಎಸ್.ಜಿ ಸಿದ್ದರಾಮಯ್ಯ ಅವರು ಮಾತನಾಡಿ, ದೇಶವು ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತವಾದರೆÀ ಮಾತ್ರ ಸಂಪೂರ್ಣ ಸ್ವಾತಂತ್ರö್ಯ ಹೊಂದಬಹುದು ಎಂದು ಹೇಳಿದರು.

ಹನ್ನೆರಡನೆ ಶತಮಾನದಲ್ಲಿ ಬಸವಣ್ಣನವರ ಕ್ರಾಂತಿಕಾರಕ ಮಾನವ ಧರ್ಮ ಹೊಸ ವೈಚಾರಿಕತೆಯೆಡೆಗೆ ಸಾಗಿತ್ತು. ಭಾಷೆ, ಸಂಸ್ಕೃತಿ, ಪರಂಪರೆಯಲ್ಲಿ ಚಳುವಳಿಗಳಿಂದ ಮೂಡಿದ ಹೊಸ ಬದಲಾಣೆಯಿಂದಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಗುರುತಿಸಿದೆ. ಅಭಿವೃದ್ಧಿಪರ ವಾಸ್ತವಿಕತೆಯಲ್ಲಿ ಜನರು ಜೀವಿಸಿದಾದ ನಿಜವಾದ ಸ್ವಾತಂತ್ರö್ಯದ ಅನುಭವ ನಮಗೆ ಸಿಗುತ್ತದೆ. ಮಹಾನ್ ವ್ಯಕ್ತಿತ್ವವುಳ್ಳ ಗಾಂಧೀಜಿ, ಅಂಬೇಡ್ಕರ್ ಅವರ ವೈಚಾರಿಕ ತತ್ವಗಳಿಂದ ಇಂದು ದೇಶವನ್ನು ಗುರುತಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿವಿ ಯ ಕಲಾ ನಿಕಾಯದ ಡೀನ್‌ರಾದ ಪ್ರೊ. ಎನ್. ಶಾಂತನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಸತ್ಯವತಿ, ಗಣಕಯಂತ್ರ ವಿಭಾಗದ ಡಾ.ಹೆಚ್.ರಾಚಪ್ಪ, ಡಾ.ಹನುಮೇಶ್, ಜಯಶೀಲ, ಡಾ.ವೇದಾಂತ ಸೇರಿದಂತೆ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ