Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷಯ ಮುಕ್ತ’ ದೇಶಕ್ಕಾಗಿ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆಗೆ ಒಳಗಾಗಿ


 ಬಳ್ಳಾರಿ, ಜೂನ್ 30:


`ಕ್ಷಯ ಮುಕ್ತ’ ದೇಶಕ್ಕಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಜನರು ಉಚಿತ ಆರೋಗ್ಯ ತಪಾಸಣೆಗೆ ಒಳಗಾಗಿ ರೋಗ ಪತ್ತೆ ಮತ್ತು ಚಿಕಿತ್ಸೆಗೆ ನೆರವಾಗಬೇಕು ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವಕಾರ್ಯದರ್ಶಿ ಕೆ.ಸಿ. ಸುರೇಶ್‌ಬಾಬು ಅವರು ತಿಳಿಸಿದ್ದಾರೆ.


ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಚೇಂಬರ್ ಉಚಿತ ಆಸ್ಪತ್ರೆಯ ಆವರಣದಲ್ಲಿ ಸೋಮವಾರದಿಂದ ಏಳು ದಿನಗಳ ಕಾಲ ನಡೆಯುವ ಉಚಿತ ಟಿ.ಬಿ. (ಕ್ಷಯರೋಗ) ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ದೇಶದ ಮತ್ತು ಕುಟುಂಬದ ಉತ್ತಮ ಆರೋಗ್ಯವು ಸಮಾಜದಲ್ಲಿಯ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯದ ವಾಸ್ತವಾಂಶವನ್ನು ಪ್ರತಿನಿಧಿಸುತ್ತದೆ. ಕಾರಣ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಇರಲು ಆದ್ಯತೆ ನೀಡಬೇಕು ಎಂದರು.


ತಜ್ಞ ವೈದ್ಯೆ ಶೆಗುಫ್ತ್, ಲ್ಯಾಬ್ ಟೆಕ್ನಿಷಿಯನ್ ಶೇಕ್ಷಾವಲಿ, ಬಳ್ಳಾರಿ ಡಿಸ್ಟಿçಕ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷರಾದ ವಿ. ರಾಮಚಂದ್ರ, ಚೇಂಬರ್ ಆಫ್ ಕಾಮರ್ಸ್ ಉಚಿತ ಆಸ್ಪತ್ರೆಯ ಚೇರ್ಮನ್ ಸುರೇಂದ್ರ ಕುಮಾರ್ ಬಾಫ್ನಾ, ದಲ್ಲಾಲಿ ವರ್ತಕರ ಸಂಘದ ಕಾರ್ಯದರ್ಶಿ ಎಂ. ಗುರುಸ್ವಾಮಿ, ಉಪಾಧ್ಯಕ್ಷ ಕೆ. ನಾಗರಾಜ್, ವೈದ್ಯಾಧಿಕಾರಿ ಡಾ. ಕಟ್ಟಾ ಸತ್ಯನಾರಾಯಣ, ಬಿಡಿಸಿಸಿಐ ಹಾಗೂ  ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಕೂಲಿ ಕಾರ್ಮಿಕರು, ಹಮಾಲಿಗಳು, ರೈತರು ಮತ್ತು ಕಾಯಿಪಲ್ಲೆ ಮಾರಾಟಗಾರರು, ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆಗೆ ಒಳಗಾದರು. ವೈದ್ಯರು, ಆರೋಗ್ಯ ತಪಾಸಣೆಗೆ ಒಳಗಾದವರಿಗೆ ಟಿಬಿಯ ಲಕ್ಷಗಳು, ಉಚಿತ ಚಿಕಿತ್ಸೆ - ಔಷಧಿ, ಆರೋಗ್ಯಯುಕ್ತ - ಪೌಷ್ಟಿಕಾಂಶದ ಆಹಾರಗಳ ಕುರಿತು ಮಾಹಿತಿ ನೀಡಿ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ