Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು ತಮ್ಮ ಬೆಳೆ ವಿವರ ದಾಖಲಿಸಲು ಮೊಬೈಲ್ ಆಪ್ ಬಳಸಿ


ಬಳ್ಳಾರಿ,ಜು.



ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.

*ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು*:

ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇಸ್ಟೋರ್ನಿಂದ ಬೆಳೆ ಸಮೀಕ್ಷೆ ಮುಂಗಾರು ಹಂಗಾಮಿನ “ಕ್ರಾಪ್ ಸರ್ವೇ ಖಾರಿಫ್ 2024” (Crop Survey Kharif 2024) ಆಪ್ನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 3,80,888 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು.

ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟ್ರೀಯ ಹಾಗೂ ಗ್ರಾಮೀಣ ಬ್ಯಾಂಕ್ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ