Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ



ಶಿವಮೊಗ್ಗ, ಮಾರ್ಚ್. 18: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 4 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಈ ಶಿಬಿರದಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.



ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 27/03/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 27/03/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/9591514154/9686248369/ 6363139123/9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ