Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

----
ಕೊಪ್ಪಳ ಜುಲೈ 21: ಪೊಲೀಸ್ ಸಿಬ್ಬಂದಿಯ ಕುಟುಂಬದವರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನೆರವಾಗುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ ಉಚಿತ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಪಿ.ಎಸ್. ಹರ್ಷ ಅವರು ಪೊಲೀಸ್ ಭವನದಲ್ಲಿ ಸೋಮವಾರ (ಜು. 20ರಂದು) ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸದಾ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಸ್ವಾವಲಂಬಿ ಜೀವನ ನಡೆಸಲು ಮತ್ತು ಹೆಚ್ಚುವರಿ ಆದಾಯ ಕಂಡುಕೊಳ್ಳಲು ಈ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿಗಳು ಅತ್ಯಂತ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.
ಪೊಲೀಸ್ ಕುಟುಂಬದ ಮಹಿಳೆಯರು ಕೌಶಲ್ಯಗಳನ್ನು ಕಲಿತು ಆರ್ಥಿಕವಾಗಿ ಸದೃಢರಾಗಲು ಈ ತರಬೇತಿ ಉತ್ತಮ ಅವಕಾಶವಾಗಿದೆ. ತರಬೇತಿಯನ್ನು ಯಶಸ್ವಿಯಾಗಿ ಮುಗಿಸುವ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭಿಸಲು ಅಥವಾ ಇತರೆ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ನೆರವಾಗಲಿದೆ. ಪೊಲೀಸ್ ಸಿಬ್ಬಂದಿಯ ಕಲ್ಯಾಣ ಮತ್ತು ಅವರ ಕುಟುಂಬದವರ ಅಭಿವೃದ್ಧಿಗೆ ಇಲಾಖೆಯು ಸದಾ ಬದ್ಧವಾಗಿದೆ. ಈ ತರಬೇತಿಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಹೇಮಂತ್ ಕುಮಾರ್, ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗರಾಜ ಹಾಗೂ ದೀಪಾ, ಕೊಪ್ಪಳ ಡಿವೈಎಸ್ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್ಪಿ ಜೆ‌.ನ್ಯಾಮನಗೌಡರ, ಸೈಬರ್ ವಿಭಾಗದ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ, ಡಿಎಆರ್ ಡಿವೈಎಸ್ಪಿ ಶಶಿಧರಯ್ಯ ಹಿರೇಮಠ ಸೇರಿದಂತೆ ಜಿಲ್ಲೆಯ ಇತರೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಕುಟುಂಬಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲ್ಯಾಮಿನೆ ಯಮಾಲ್.... ವಿಶ್ವ ಫುಟ್ಬಾಲ್ ನ ಹೊಸ ದ್ರುವತಾರೆಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ವಸತಿ ಶಾಲೆ ಪ್ರಾಂಶುಪಾಲಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಬಂಡಿಹಟ್ಟಿ ಹಾಸ್ಟೆಲ್‌ನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರಕ್ಕೆ ಕರೆ: ನಂದಿನಿಭಾರತ್ ಜೋಡೋ ಯುವ ಸಂಘ'ಗಳನ್ನು ರಚನೆಗೆ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ* - *ಡಾ ಕುಮಾರಹಲುವಾಗಲಿ ಸೀಮಾದಲ್ಲಿ ಅಕ್ರಮ ಮರಳು ದಂಧೆಕೋರರ ಜಾಲಕ್ಕೆ ಗಣಿ ಇಲಾಖೆ ದಾಳಿ: 3000 ಮೆಟ್ರಿಕ್ ಟನ್ ಮರಳು ಜಪ್ತಿಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಶೇ. 90 ರಷ್ಟು ಕಾಣೆಯಾದ ಮಕ್ಕಳ ಪತ್ತೆ ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿ– ಎಸ್ ಪಿರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ; ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಡಿಸಿ ಮತ್ತು ಜಿಪಂ ಸಿಇಒಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ಕ್ರಮ ವಹಿಸಿ