Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.

ಧಾರವಾಡದಲ್ಲಿ ಪಂ. ಪಂಚಾಕ್ಷರ ಗವಾಯಿಗಳವರ ಪುಣ್ಯಸ್ಮರಣೆ ‘ಗುರು ಗುಣಗಾನ’ ಸಮಾರಂಭ

ಉತ್ತರದ ಸಂಗೀತವನ್ನು ದಕ್ಷಿಣಕ್ಕೆ ತಂದ ಪ್ರಮುಖರಲ್ಲಿ ಒಬ್ಬರಾದ ಮತ್ತು ತಮ್ಮ ಶಿಷ್ಯ ಪರಂಪರೆಯ ಮೂಲಕ ಧಾರವಾಡಕ್ಕೆ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತದ ತವರು ಎನ್ನುವ ಖ್ಯಾತಿ ತಂದುಕೊಡುವಲ್ಲಿ ತಮ್ಮದೆಯಾದ ಕೊಡುಗೆಯನ್ನು ನೀಡಿದ, ಗಾನಯೋಗಿ ಪಂಚಾಕ್ಷರ ಗವಾಯಿಗಳವರ ಪುಣ್ಯಸ್ಮರಣೆ ‘ಗುರು ಗುಣಗಾನ’ ಕವಿಗೋಷ್ಠಿ, ಕಾವ್ಯಗಾಯನ ಮತ್ತು ನೃತ್ಯ ನಮನವನ್ನು ಒಳಗೊಂಡ ಸಮಾರಂಭವು ದಿನಾಂಕ: ೧೪ ಜುಲೈ ೨೦೨೪ ಸಂಜೆ ೪-೦೦ ಗಂಟೆಗೆ ಧಾರವಾಡದ ರಂಗಾಯಣದಲ್ಲಿ ಗದುಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಆಯೋಜಿಸಿದೆ. ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕರಾದ ವೇ. ಚನ್ನವೀರಸ್ವಾಮಿ ಹಿರೇಮಠ (ಕಡಣಿ) ಗದಗ ಇವರು ಅಧ್ಯಕ್ಷತೆ ವಹಿಸಿಕೊಳ್ಳುವರು ಶ್ರೀಮತಿ ಮೃಣಾಲ ಜೋಶಿ ಅಧ್ಯಕ್ಷರು, ಸಂಸ್ಕೃತಿ ಶಿಶು ಮಂದಿರ, ಧಾರವಾಡ, ಶ್ರೀ ಪ್ರಕಾಶ ಬಾಳಿಕಾಯಿ ವ್ಯವಸ್ಥಾಪಕರು, ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಧಾರವಾಡ ಡಾ. ಎ. ಎಲ್ ದೇಸಾಯಿ, ಸಹಾಯಕ ಉಪನ್ಯಾಸಕರು ಕ. ವಿ. ವಿ. ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯ, ಧಾರವಾಡ ಅತಿಥಿಗಳಾಗಿ ಭಾಗವಹಿಸುವರು. ಡಾ. ಪಂ. ಪು. ಸೇವಾ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ. ಸುಮಾ ಬಸವರಾಜ ಹಡಪದ, ಹಳಿಯಾಳ ಸೇವಾ ಸಮಿತಿಯ ಮಹಿಳಾ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೊಸಪೇಟೆಯ ಶ್ರೀಮತಿ ದೇವಿಕಾ ಜೋಗಿ, ಸಮಿತಿಯ, ಕಲಘಟಗಿ ತಾಲೂಕಾ ಘಟಕದ ಅದ್ಯಕ್ಷರಾದ ಡಾ. ಸುರೇಶ ಕಳಸಣ್ಣವರ, ಹಾವೇರಿ ತಾಲೂಕಾ ಘಟಕ, ಕಾರ್ಯದರ್ಶಿ ಶಶಿಕಲಾ ಅಕ್ಕಿ ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮಮದ ನಂತರ, ಧಾರವಾಡದ ಶ್ರೀಗುರು ಪುಟ್ಟರಾಜ ಸಂಗೀತ ಶಾಲೆ, ವೀರಶೈವ ಜಾಗೃತಿ ಮಹಿಳಾ ಸಮಿತಿ, ‘ಮಾಸ್ಟರ್’ ಸಾತ್ವಿಕ್ ಜಿ. ಮಹಾಮನೆ ಇವರುಗಳು ಸಂಗೀತ ನಮನ ಸಲ್ಲಿಸುವರು. ಹುಬ್ಬಳಿಯ ಪ್ರೇರಣಾ ಸ್ಕೂಲ್ ಆಫ್ ಡ್ಯಾನ್ಸ್, ಧಾರವಾಡದ ರತಿಕಾ ನೃತ್ಯ ನಿಕೇತನ ಮತ್ತು ಉಪಾಧ್ಯ ನೃತ್ಯ ವಿಹಾರ, ತಾಳಿಕೊಟೆಯ ಶ್ರೀ ವಿರಕ್ತೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ, ಮುಂಡರಗಿಯ ನಾಟ್ಯಬಿಂದು ಡ್ಯಾನ್ಸ್ ಅಕಾಡೆಮಿ, ಸಂಸ್ಥೆಯ ಶಿಷ್ಯರು ನೃತ್ಯ ನಮನ ಸಲ್ಲಿಸುವುರು.
ಪೂಜ್ಯಗುರು ಪಂಚಾಕ್ಷರ ಗವಾಯಿಗಳವರ ಕುರಿತು ಬರೆದ ಕಲೆಗೆ ಕಣ್ಣಿತ್ತ ಪೂಜ್ಯರು ಕವಿಗೋಷ್ಠಿಯಲ್ಲಿ ಮೃತ್ಯುಂಜಯ ಹಿರೇಮಠ, ಮಾಗಡಿ ಪ್ರೊ ಜಯಶ್ರೀ ಹಿರೇಮಠ, ಧಾರವಾಡ ಪದ್ಮಾ ಜೆ. ಕಬಾಡಿ, ಗದಗ ವೀರಯ್ಯ ಸಂಕಿನಮಠ, ಹಾವೇರಿ, ಬಸವರಾಜ ಹಡಪದ, ಹಳಿಯಾಳ ವಿಮಲಾ ಮಲ್ಲಪ್ಪ, ಹುಬ್ಬಳ್ಳಿ. ಸಂಧ್ಯಾ ದೀಕ್ಷಿತ, ಹುಬ್ಬಳ್ಳಿ ಸುಲೋಚನ ಮಾಲಿಪಾಟೀಲ್, ಧಾರವಾಡ ರೇಖಾ ಜೋಶಿ, ಧಾರವಾಡ ವೀರೇಶರಡ್ಡಿ ಟಿ. ಕಾಮರಡ್ಡಿ, ಕನಕವಾಡ ದಾನಮ್ಮ ವೀ ಅಂಗಡಿ, ಬೆಲ್ಲದ ಬಾಗೇವಾಡಿ ಮಧುಮತಿ ಸಣಕಲ್, ಧಾರವಾಡ ಸೀತಾ ಛಪ್ಪರ, ಧಾರವಾಡ ಶಾರದಾ ಕೆಲಸಂಗದ, ಧಾರವಾಡ ಶಾಂತಕ್ಕ ಹೊಂಬಳ, ಧಾರವಾಡ ಇಂದಿರಾ ಮೋಟೆಬೆನ್ನೂರ, ಬೆಳಗಾವಿ ಇವರುಗಳು ತಮ್ಮ ಕವನದ ಮೂಲಕ ಗುರು ಗುಣಗಾನ ಮಾಡಲಿದ್ದಾರೆ. ಶ್ರೀಮತಿ ಸುಧಾ ಕಬ್ಬೂರ ಇವರು ಕಾರ್ಯಕ್ರಮದ ನಿರೂಪಣೆ ಮಾಡುವರು ಎಂದು ಡಾ.ಪಂ.ಪುಟ್ಟರಾಜ ಸೇವಾ ಸಮಿತಿಯ ಡಾ. ಸುಮಾ ಹಡಪದ, ಹಳಿಯಾಳ ಇವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಗಡಿಗಳ ಬೀಗ ಮುರಿದು ಕಳವು: ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಬಂಧನ : ಸಾಹಿಲ್ ಬಾಗ್ಲಾ ======ರಸಗೊಬ್ಬರ ಅಕ್ರಮ ದಾಸ್ತಾನು: ಕೃಷಿ ಅಧಿಕಾರಿಗಳ ಮಿಂಚಿನ ದಾಳಿ ₹1.80 ಲಕ್ಷ ಮೌಲ್ಯದ 680 ಚೀಲ ವಶ; ಸಿರಿಗೇರಿ ಠಾಣೆಯಲ್ಲಿ ಪ್ರಕರಣಇಲಾಖೆ ನಿಯಮಾನುಸಾರ ಶಾಂತಿ ಸು ವ್ಯವಸ್ಥೆಯೊಂದಿಗೆ  ಶ್ರೀ ಗೌರಿ ಗಣೇಶ ಹಬ್ಬ ಆಚರಿಸಿ : ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ .ಡಿ ಪನ್ನೇಕರ್ ಕರೆಬದಲಿ ಕೃಷಿ ಕ್ರಾಂತಿ: ‘ದೃಢ ಕರ್ನಾಟಕ ಸಂಕಲ್ಪ’ ದಡಿ ಸಾಗುತ್ತಿದೆ ಪ್ರಗತಿಯ ರಥ ಭೂಮಿ, ನೀರು ಮತ್ತು ತಂತ್ರಜ್ಞಾನದ ಸಂಗಮ: ಸರ್ಕಾರದ ನೂರು ದಿನಗಳ ಪಯಣದಲ್ಲಿ ಅನ್ನದಾತನ ಬದುಕಿಗೆ ಹೊಸ ಭರವಸೆ ನೇಗಿಲ ಯೋಗಿಯಿಂದ ಡಿಜಿಟಲ್ ಮಿಷನ್‌ವರೆಗೆ: ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸುತ್ತಿರುವ ದೃಢ ಸರ್ಕಾರದ ನೂತನ ಉಪಕ್ರಮಗಳುಮನೆ ಬಾಗಿಲಿಗೆ ನಮ್ಮ ಸರ್ಕಾರ: ಗುಡೇಕೋಟೆ ಹೋಬಳಿಯಲ್ಲಿ ಇಂದು ಪ್ರಜಾ ಆಂದೋಲನ ವಿಶೇಷ ಕಾರ್ಯಕ್ರಮಸಮ್ಮೇಳನ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಡಾ  ಮಧುಸೂದನ ಕಾರಿಗನೂರ ಬಹಿರಂಗ ಸಮಾವೇಶ: ಬಳ್ಳಾರಿ ನಗರದಲ್ಲಿ ಮದ್ಯ ಮಾರಾಟ, ಸಾಗಣೆ ಸಂಪೂರ್ಣ ನಿಷೇಧಬಹಿರಂಗ ಸಮಾವೇಶ: ಬಳ್ಳಾರಿ ನಗರದಲ್ಲಿ ಮದ್ಯ ಮಾರಾಟ, ಸಾಗಣೆ ಸಂಪೂರ್ಣ ನಿಷೇಧಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶ: ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿವಾರಣಾಸಿಯ ಗಂಗಾ ಆರತಿಯ ಮಾದರಿಯಲ್ಲಿ ಶ್ರೀಕ್ಷೇತ್ರ ಹುಲಿಗಿಯಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಸಂಭ್ರಮ ----