ಕೊಪ್ಪಳ ಜುಲೈ 28 ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇದ್ದ ವೈದ್ಯ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರು ನೇರಸಂದರ್ಶನಕ್ಕೆ ಹಾಜರಾಗಬಹುದು.
ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ವೈದ್ಯ ಹುದ್ದೆಗಳಿಗೆ ದಿನಾಂಕ:13.04.2026 ರಂದು ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 54 ಖಾಲಿ ಹುದ್ದೆಗಳು ಇರುತ್ತವೆ. (ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು-10, ಹಿರಿಯ ವೈದ್ಯಾಧಿಕಾರಿಗಳು-02 ತುರ್ತು ಚಿಕಿತ್ಸಾ ವೈದ್ಯರು-05, ವಿವಿಧ ತಜ್ಞ ವೈದ್ಯರುಗಳು-37) ಕಾರಣ ಆಸಕ್ತಿಯುಳ್ಳ ಅರ್ಹ ಎಂ.ಬಿ.ಬಿ.ಎಸ್ ಮತ್ತು ತಜ್ಞವೈದ್ಯ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳು, 371ಜೆ ಹಾಗೂ ಇತರೆ ಮೂಲ ದಾಖಲಾತಿಗಳೊಂದಿಗೆ ಒಂದು ಸ್ವಯಂ ದೃಢೀಕೃತ ಜರಾಕ್ಸ್ ಪ್ರತಿ ಹಾಗೂ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಖಾಲಿಯಿರುವ ಮೇಲಿನ ವೈದ್ಯರ ಹುದ್ದೆಗಳು ಭರ್ತಿಯಾಗುವವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಕೊಪ್ಪಳದಲ್ಲಿ ಕರ್ತವ್ಯದ ಅವಧಿಯಲ್ಲಿ ನೇರಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
