Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಬರಿಮಲೈ ಯಾತ್ರಿಕರಿಗೆ ಆರೋಗ್ಯ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮ



ಶಿವಮೊಗ್ಗ, ನ.20 ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:- ನಿಂತ ನೀರು, ಕೊಳ/ಈಜುಕೊಳಗಳು ಹಾಗೂ ಕೆರೆ.



ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.



ನೇಗ್ಲೇರಿಯಾ ಫೌಲೇರಿ (Naegleria Fowleri) ಅತ್ಯಂತ ವಿಷಕಾರಿ (Virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic Meningoencephalitis) ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು, ಮುನ್ನಚ್ಚರಿಕೆ ವಹಿಸುವುದು,



ನೀರಿನ ಸಂಪರ್ಕದ 7 ದಿನಗಳೊಳಗೆ ಜ್ವರ, ತೀವ್ರ ತಲೆನೋವು, ವಾಕರಿಕೆ/ವಾಂತಿ, ಕುತ್ತಿಗೆ ಬಿಗಿತ. ಗೊಂದಲ/ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ (Behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ