ಸಿರುಗುಪ್ಪ : ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಸಮಾಜಸೇವಕರೊಬ್ಬರು ಗಾಯಾಳುಗಳಿಗೆ ತಕ್ಷಣ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಶರಣಬಸವ ಹಾಗೂ ಸಿರುಗುಪ್ಪ ತಾಲೂಕಿನ ಎಚ್. ಹೊಸಹಳ್ಳಿ ಗ್ರಾಮದ ವ್ಯಕ್ತಿ ಅಪಘಾತದಲ್ಲಿ ಗಾಯಗೊಂಡಿದ್ದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಸಮಾಜಸೇವಕರು, ಗಾಯಾಳುಗಳನ್ನು ಆಟೋ ಮೂಲಕ ತೆಕ್ಕಲಕೋಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವಿತೆ ಮೆರೆದ ಎಮ್ ಎಅ್ ಸಿದ್ದಪ್ಪ