ಸಿರುಗುಪ್ಪ, ಸೆ.26: ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಶನಿವಾರ ತೆಕ್ಕಲಕೋಟೆ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಿತು.
ಸಿರುಗುಪ್ಪ ತಹಶೀಲ್ದಾರ್ ಶ್ರೀಮತಿ ಗೌಸಿಯಾ ಬೇಗಂ ಸಭೆಯನ್ನು ಉದ್ಘಾಟಿಸಿ ಮಾತಾಡಿ
ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಆಂದೋಲನ ಆಯೋಜಿಸಲಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಲು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಅಹವಾಲು ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆ ಮುಂದುವರಿದಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತಿದ್ದು, ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಕಾರ್ಯಕ್ರಮದಲ್ಲಿ ಸಾರ್ವಜನಿಕ ರಿಂದ ವಿವಿದ ಇಲಾಖೆಯ ಒಟ್ಟು 43 ಅರ್ಜಿ ಗಳು ಸಲ್ಲಿಕೆಯಾಗಿವೆ.