Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣಾಭಿವೃದ್ಧಿಗೆ ವಿಶೇಷ ಮಹತ್ವ : ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳು

ಬೆಂಗಳೂರು : 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ರಾಜ್ಯದ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಸೇರಿ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಯನ್ನು 125 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ನಾಮಕರಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಇದೇ ವೇಳೆ ರಾಜ್ಯದ ಎಲ್ಲಾ ಪಂಚಾಯಿತಿಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ಮೈಕ್ರೋ ಗ್ರಿಡ್‌ಗಳನ್ನು ಸ್ಥಾಪಿಸುವ ‘ಅನಂತ’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ವಿದ್ಯುತ್ ಹಾಗೂ ಆಡಳಿತಾತ್ಮಕ ವ್ಯವಸ್ಥೆಗಳನ್ನು ಬಲಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿರುವುದು ಬಜೆಟ್‌ನ ಪ್ರಮುಖ ಅಂಶವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ