Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

“ಬೇಸಿಗೆ ಶಿಬಿರ” ಸಮಾರೋಪದಲ್ಲಿ ಎಳೆನಾಗಪ್ಪ ಹೇಳಿಕೆ ಮಕ್ಕಳಲ್ಲಿನ ಪ್ರತಿಭೆಗಳು ಹೊರಹೊಮ್ಮಲಿ






ಬಳ್ಳಾರಿ,ಮೇ 30:

ಮಕ್ಕಳಲ್ಲಿರುವ ಅನೇಕ ರೀತಿಯ ಪ್ರತಿಭೆಗಳನ್ನು ಗುರುತಿಸಲು ಬೇಸಿಗೆ ಶಿಬಿರಗಳು ಅವಶ್ಯಕವಾಗಿದ್ದು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅನುಕೂಲಕರವಾಗಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಹೇಳಿದರು.

ಗುರುವಾರ ನಗರದ ಕಂಟೋನ್ ಮೆಂಟ್ ನ ಶಾಂತಿಧಾಮ ಆವರಣದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮೇ 15 ರಿಂದ 29 ರವರೆಗೆ 05 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ 15 ದಿನಗಳ ಕಾಲ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಸಮೂಹ ನೃತ್ಯ, ಸಮೂಹ ಗೀತೆ, ಕರಾಟೆ, ಯೋಗ ಇತ್ಯಾದಿ ಒಳಗೊಂಡAತೆ ಆಯೋಜಿಸಿದ್ದ “ಬೇಸಿಗೆ ಶಿಬಿರ” ಕಾರ್ಯಗಾರದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ವಿವಿಧ ಕಲೆಗಳ ಪ್ರತಿಭೆಯಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಹೊರ ತರುವ ಕಾರ್ಯವಾಗಬೇಕು. ಇದಕ್ಕೆ ಬೆಂಗಳೂರಿನ ಬಾಲಭವನ ಸೊಸೈಟಿ ವತಿಯಿಂದ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿದೆ ಎಂದು ಹೇಳಿದರು.

ಪ್ರತಿ ವರ್ಷ ಮಕ್ಕಳಿಗೆ “ಬೇಸಿಗೆ ಶಿಬಿರ” ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಂಸೆ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ಬುದ್ದಿಮಾಂಧ್ಯ ಬಾಲಕರ ಬಾಲಮಂದಿರದ ಅಧೀಕ್ಷಕ ಹೆಚ್.ಡಿ. ಗುರುಬಸವ, ಸರ್ಕಾರಿ ಬಾಲಕಿಯರ ಬಾಲಮಂದಿರದ ಪರಿವೀಕ್ಷಣಾಧಿಕಾರಿ ನಾಗವೇಣಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ, ಗಂಗಮ್ಮ, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ದೊಡ್ಡಬಸಪ್ಪ, ಸುರೇಶ, ಭೀಮಲಿಂಗ, ಶ್ರೀಜಾ, ಜಗನ್ನಾಥ ಸೇರಿದಂತೆ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಮಕ್ಕಳು ಹಾಗೂ ಇತರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಾಲಕಿಯರ ಬಾಲಮಂದಿರದ ಮಕ್ಕಳಾದ ತುಳಸಿ ಮತ್ತು ದೇವಮ್ಮ ತಂಡ ಪ್ರಾರ್ಥನೆ ಗೀತೆ ನೆರವೇರಿಸಿದರು. ಜಿಲ್ಲಾ ಸಂಯೋಜಕ ಮಂಜುನಾಥ ಡಿ.ಜಿ ಸ್ವಾಗತಿಸಿದರು. ಜಿಲ್ಲಾ ಬಾಲಭವನ ಸೊಸೈಟಿಯ ಕಚೇರಿ ಸಹಾಯಕ ಜೀರ್ ಮಲ್ಲಿಕಾರ್ಜುನ ಅವರು ವಂದಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ