Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ

ಬಳ್ಳಾರಿ,ಜೂ.24
ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಜೂನ್ 25 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಬದಲಾಯಿಸಿರುವ 33 ಸ್ಟೀಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಕೆ.ಪವನ್ ಕಲ್ಯಾಣ್, ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲುಭಟ್ಟಿ ವಿಕ್ರಮಾರ್ಕ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ ಭೂಷಣ ಚೌಧರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್ ಹೊರಟ್ಟಿ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ- ಗದಗ ಸಂಸದ ಬಸವರಾಜ ಬೊಮ್ಮಾಯಿ, ಆಂಧ್ರಪ್ರದೇಶ ಜಲಸಂಪನ್ಮೂಲ ಸಚಿವ ಡಾ.ನಿಮ್ಮಲ ರಾಮನಾಯ್ಡು, ಆಂಧ್ರಪ್ರದೇಶದ ಹಣಕಾಸು ಯೋಜನೆ, ವಾಣಿಜ್ಯ ತೆರಿಗೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪಯ್ಯವುಲ ಕೇಶವ್, ತೆಲಂಗಾಣ ನೀರಾವರಿ ಹಾಗೂ ಸಿಎಡಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ, ರಾಜ್ಯದ ಸರ್ಕಾರಿ ಮುಖ್ಯ ಸಚೇತಕ ಹಾಗೂ ಶಾಸಕ ಸಲೀಂ ಅಹಮದ್, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಮಸ್ಕಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಆರ್.ಬಸನಗೌಡ ತುರ್ವಿಹಾಳ, ಸಿಂಧನೂರು ಶಾಸಕರು ಹಾಗೂ ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಂಪನಗೌಡ ಬಾದರ್ಲಿ, ರೋಣ ಶಾಸಕರು ಹಾಗೂ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಪಾಟೀಲ್, ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ನಿಗಮ ನಿಯಮಿತ ಅಧ್ಯಕ್ಷರಾದ ಜೆ.ಎನ್.ಗಣೇಶ್, ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹನುಮನಗೌಡ ಪಾಟೀಲ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಕೇಂದ್ರ ಜಲ ಆಯೋಗದ ಅಧ್ಯಕ್ಷರಾದ ಅನುಪಮ್ ಪ್ರಸಾದ್ ಘನ ಉಪಸ್ಥಿತರಿರುವರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ್, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ಬಳ್ಳಾರಿ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ರಾಯಚೂರು ಸಂಸದ ಜಿ.ಕುಮಾರ್ ನಾಯಕ್, ಬಳ್ಳಾರಿ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಕನಕಗಿರಿ ಶಾಸಕ ಶಿವರಾಜ್ ಎಸ್. ತಂಗಡಗಿ, ಗಂಗಾವತಿ ಶಾಸಕ ಜಿ.ಜನಾರ್ಧನ ರೆಡ್ಡಿ, ವಿಜಯನಗರ ಶಾಸಕ ಹೆಚ್.ಆರ್.ಗವಿಯಪ್ಪ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣ ನಾಯಕ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ವಿಧಾನಸಭಾ ಕ್ರೇತ್ರದ ಶಾಸಕ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕಿ ಈ.ಅನ್ನಪೂರ್ಣ ತುಕಾರಾಂ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ಜಿ.ನಮೋಶಿ, ಚಂದ್ರಶೇಖರ್ ಬಿ ಪಾಟೀಲ್, ಶರಣಗೌಡ ಎ. ಪಾಟೀಲ್ ಬಯ್ಯಾಪುರ, ಹೇಮಲತಾ ಪಿ.ನಾಯಕ್, ವೈ.ಎಂ.ಸತೀಶ್, ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹಸನ್‌ಸಾಬ್ ನಬಿಸಾಬ್ ದೋಟಿಹಾಳ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ವಿಜಯನಗರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ಶಿವಮೂರ್ತಿ ಮತ್ತು ರಾಯಚೂರು, ಗದಗ, ಹಾವೇರಿ ಜಿಲ್ಲೆಗಳ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಕೇಂದ್ರ ಜಲಶಕ್ತಿ ಇಲಾಖೆ, ರಾಜ್ಯ ಜಲಸಂಪನ್ಮೂಲ ಇಲಾಖೆ ಸೇರಿದಂತೆ ಕರ್ನಾಟಕ ರಾಜ್ಯದ ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಪ್ರಮುಖ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮಹೊಸ ಆದಾಯ ತೆರಿಗೆ ಕಾಯ್ದೆ-2025 ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಆದಾಯ ತೆರಿಗೆ ಅಧಿಕಾರಿ ರಾಮನಾಥನ್ ಹೇಳಿಕೆ ಸುಲಭ ತೆರಿಗೆ ವ್ಯವಸ್ಥೆಯಿಂದ ದೇಶದ ಪ್ರಗತಿ ಸಾಧ್ಯದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭಕೃಷಿ ಇಲಾಖೆ: ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಸಲಹೆಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಜೂ.25 ರಂದು ತುಂಗಭದ್ರಾ ಜಲಾಶಯ ನೂತನ ಸ್ಟೀಲ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ41 ಬೈಕ್ ಕಳವು ಪ್ರಕರಣ ಭೇದಿಸಿದ ಸಿರುಗುಪ್ಪ ಪೊಲೀಸರು; ರೂ.20.50 ಲಕ್ಷ ಮೌಲ್ಯದ ವಾಹನಗಳ ಜಪ್ತಿತುಂಗೆಯ ಅಂಗಳದಲ್ಲಿ ಹಬ್ಬದ ಸಂಭ್ರಮ * ಟಿಬಿ ಡ್ಯಾಮ್, ಮುನಿರಾಬಾದನಲ್ಲಿ ಖಾಕಿ ಪಡೆಯಿಂದ ಸರ್ಪಗಾವಲು * ಕೊಪ್ಪಳ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅನ್ನದಾತರ ಮೊಗದಲ್ಲಿ ಹರ್ಷಸಂಡೂರು: ಬೆಳೆ ವಿಮೆ ತಿರಸ್ಕೃತ ಪ್ರಸ್ತಾವನೆಗಳ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ