Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಬಾಲಕಾರ್ಮಿಕ ಅಧಿಕಾರಿಗಳಿಂದ ತಪಾಸಣೆ: ಒಬ್ಬ ಬಾಲಕಾರ್ಮಿಕನ ರಕ್ಷಣೆ

ರಾಯಚೂರು, ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ನಗರದ ವಿವಿಧ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ತಪಾಸಣೆ ಮಾಡಿ ಒಬ್ಬ ಬಾಲ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಆಶಾಪೂರು ರಸ್ತೆಯ ಪದ್ಮಾವತಿ ಕಾಲೋನಿಯ ವೀರಭದ್ರೇಶ್ವರ ಹೋಟೆಲ್ ಮತ್ತು ಖಾನಾವಳಿ ಮಾಲೀಕರಾದ ವಿಶ್ವನಾಥಸ್ವಾಮಿ ಅವರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲೆ ಮಾಡಲಾಗಿದೆ.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000/-ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ.

ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, ಕಾರ್ಮಿಕ ನಿರೀಕ್ಷಕರಾದ ಪರಶುರಾಮ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಹುಸೇನ್ ಬಾಷಾ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಸಿಬ್ಬಂದಿಗಳಾದ ತಿಕ್ಕಯ್ಯ, ತಾಯ್‌ರಾಜ್, ಮಹೇಶ, ಮುಕ್ಕಣ್ಣ ಹಾಗೂ ಗೋಪಾಲ್ ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ