Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿಗೆ ಆಹ್ವಾನ







ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(ಖWಃಅIS)ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.



ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ (ಖ-WಃಅIS) ಮುಖ್ಯ ಉದ್ದೇಶವಾಗಿದೆ.

ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ.

*ಹಸಿ ಮೆಣಸಿನಕಾಯಿ:* ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ.

*ದಾಳಿಂಬೆ:* ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6350 ಆಗಿರುತ್ತದೆ.

ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9481305830, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ.9916794371 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















Like












Comment









Send









Share












Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ