Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರ ಮನೆ ಬಾಗಿಲಿಗೆ ವಿವಿಧ ಸೌಲಭ್ಯ ಒದಗಿಸಲು ಕ್ರಮ : ಜಗದೀಶ್.ಜಿ











ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 18 : ವಿಕಲಚೇತನರನ್ನು ಗುರುತಿಸಿ ಅವರಿಗೆ ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿ ಸೇವೆಗಳನ್ನು ಅವರ ಮನೆ ಬಾಗಿಲಿನಲ್ಲೇಯೇ ಕಲ್ಲಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಜಿಲ್ಲಾ ಪುನರ್ವವಸತಿ ಕೇಂದ್ರಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾ ಪುನರ್ವವಸತಿ ಕೇಂದ್ರದ ಮೂಲಕ ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ತಿಳಿಸಿದರು.



ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ, ಜಿಲ್ಲಾ ಪುನರ್ವವಸತಿ ಕೇಂದ್ರದ, ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಬೆಂಗಳೂರು ನಗರ ಜಿಲ್ಲಾ ಪುನರ್ವವಸತಿ ಯೋಜನೆಯನ್ನು ಕುಮಾರ ಪಾರ್ಕ್ ಟ್ರಸ್ಟ್(ರಿ), ಈ ಸ್ವಯಂ ಸೇವಾ ಸಂಸ್ಥೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತಪಾಸಣಾ ಶಿಬಿರಗಳ ಮೂಲಕ ವಿಕಲಚೇತನರ ಸಮೀಕ್ಷೆ ಹಾಗೂ ಗುರುತಿಸುವಿಕೆ, ವಿಕಲತೆಯನ್ನು ತಡೆಗಟ್ಟುವುದು. ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಾರ್ಡ್) ಮಾಡಿಸುವುದು. ಅಗತ್ಯ ಸಾಧನ ಸಲಕರಣೆಗಳನ್ನು ನೀಡುವುದು. ರಿಯಾಯಿತಿ ದರದ ಬಸ್ ಪಾಸ್, ಅಂಗವಿಕಲತೆಯ ನಿವಾರಣಾ ಶಸ್ತ್ರಚಿಕಿತ್ಸೆಗೆ ಮಾಹಿತಿ ನೀಡುವುದು ಹಾಗೂ ಇಲಾಖೆಯ ಎಲ್ಲಾ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅಗತ್ಯ ಸೌಲಭ್ಯಗಳನ್ನು ಹಾಗೂ ಪುನರ್ವಸತಿಯನ್ನು ಸರ್ಕಾರದಿಂದ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.



ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸೌಲಭ್ಯಗಳನ್ನು ಪಡೆಯಲು, ಜಿಲ್ಲಾ ಪುನರ್ವವಸತಿ ಕೇಂದ್ರ, ಕುಮಾರ ಪಾರ್ಕ್ ಟ್ರಸ್ಟ್(ರಿ), ದೂರವಾಣಿ ಸಂಖ್ಯೆ-080-41179472 ಅನ್ನು ಸಂಪರ್ಕಿಸಿ, ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸದುಪಯೋಗ ಪಡಿಸಿಕೊಳ್ಳಬೇಕಾಗಿ ತಿಳಿಸಿದರು.



ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆ ಅಪರ ಜಿಲ್ಲಾಧೀಕಾರಿಗಳಾದ ಡಾ.ಜಗದೀಶ್.ಕೆ, ಜಿಲ್ಲಾ ಅಂಗವಿಕಲಕರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ ಕೆ, ಕುಮಾರ ಪಾರ್ಕ್ ಟ್ರಸ್ಟ್(ರಿ)ನ ಸದಸ್ಯ ಕಾರ್ಯದರ್ಶಿ ರಾಜು ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ