ಬಳ್ಳಾರಿ,ಆ.28
ಸಾವಿರಾರು ವರ್ಷಗಳಿಂದ ಸಮುದಾಯದಲ್ಲಿ ಬೇರೂರಿರುವ ಕ್ಷಯರೋಗ (ಟಿಬಿ) ನಿರ್ಮೂಲನೆಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದ್ದು, ರೋಗಿಗಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಇಂದ್ರಾಣಿ ವಿ. ಅವರು ಹೇಳಿದರು.
ಮಂಗಳವಾರ, ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಇಲಾಖೆ, ಸಂಡೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ‘ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್ ಪ್ರೆöÊ. ಲಿಮಿಟೆಡ್’ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ’ದಡಿ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಕೋ ಬ್ಯಾಕ್ಟೀರಿಯಾ ಟ್ಯೂಬರ್‌ಕ್ಯುಲೋಸಿಸ್ ಎಂಬ ರೋಗಾಣುವಿನಿಂದ ಗಾಳಿ ಮೂಲಕ ಹರಡುವ ಈ ಕಾಯಿಲೆಯು ಎರಡು ವಾರಕ್ಕೂ ಹೆಚ್ಚು ಕಾಲ ಕೆಮ್ಮು, ಉಸಿರಾಟದ ತೊಂದರೆ, ಸಂಜೆ ವೇಳೆ ಜ್ವರ, ರಾತ್ರಿ ಮೈ ಬೆವರುವುದು, ಕಫದಲ್ಲಿ ರಕ್ತ, ಎದೆನೋವು, ಹಸಿವಾಗದಿರುವುದು ಹಾಗೂ ತೂಕ ಇಳಿಕೆ ಟಿಬಿಯ ಮುಖ್ಯ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಂಡುಬAದಲ್ಲಿ ಕೂಡಲೇ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣೆ ಮಾಡಿಸಿ, 6 ರಿಂದ 9 ತಿಂಗಳು ಕಡ್ಡಾಯವಾಗಿ ಔಷಧ ಸೇವಿಸಿ ಗುಣಮುಖರಾಗಬೇಕು ಎಂದು ತಿಳಿಸಿದರು.
ಸಂಡೂರು ತಾಲೂಕಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ 177 ಕ್ಷಯರೋಗಿಗಳನ್ನು ‘ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೋರ್ಟ್ಸ್’ ಸಂಸ್ಥೆಯು ದತ್ತು ತೆಗೆದುಕೊಂಡಿದ್ದು, ಮುಂದಿನ ಆರು ತಿಂಗಳ ಕಾಲ ವಿವಿಧ ದವಸ-ಧಾನ್ಯಗಳನ್ನೊಳಗೊಂಡ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲಿದೆ. ಇದೇ ರೀತಿಯಾಗಿ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳು ಹಾಗೂ ದಾನಿಗಳು ಕ್ಷಯರೋಗಿಗಳನ್ನು ದತ್ತು ಪಡೆದು ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಮಾತನಾಡಿ, 1882ರಲ್ಲಿ ರಾಬರ್ಟ್ ಕೋಚ್ ಟಿಬಿ ರೋಗಾಣು ಕಂಡುಹಿಡಿದ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಿದೆ. ಪ್ರಸ್ತುತ ಸೂಕ್ತ ಚಿಕಿತ್ಸೆಯಿಂದ ರೋಗವನ್ನು ಸಂಪೂರ್ಣ ಗುಣಪಡಿಸಬಹುದು. ರೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೆಮ್ಮುವಾಗ ಕರವಸ್ತç ಬಳಸಬೇಕು ಹಾಗೂ ಎಲ್ಲೆಂದರಲ್ಲಿ ಉಗುಳಬಾರದು ಎಂದು ಸಲಹೆ ನೀಡಿದರು.
ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಮಾಳವಿಕಾ ಅವರು ಮಾತನಾಡಿ, ಇಂತಹ ಜನಹಿತ ಕಾರ್ಯಕ್ರಮಗಳಿಗೆ ತಮ್ಮ ಸಂಸ್ಥೆಯ ಸಿ.ಎಸ್.ಆರ್ ಅನುದಾನದಿಂದ ನೆರವು ನೀಡಲು ಸದಾ ಸಿದ್ಧ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಡೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಹರೀಶ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಪವನ್ ಕುಮಾರ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್. ಕರ್ಜಗಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಂಡೆಗೌಡ, ಡಿಪಿಪಿಎಮ್‌ಸಿ ಬಸವರಾಜ್, ಅನಿಲ್ ಕುಮಾರ್, ಆರ್.ಕೆ.ಎಸ್.ಕೆ ಕೌನ್ಸಲರ್ ಗಳಾದ ಶ್ರೀಧರ, ಪತ್ರೆಗೌಡ, ಕೊಟ್ರೇಶ ಸೇರಿದಂತೆ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.