Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಮುವಿ ವಿಶ್ವವಿದ್ಯಾನಿಲಯ: ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಏ.02

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ವರ್ಷದ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

*ಕೋರ್ಸ್ಗಳು:*

ಪದವಿ: ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ.

ಸ್ನಾತಕೋತ್ತರ ಪದವಿ: ಎಂ.ಎ., ಎಂ.ಕಾಮ್., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ.

ಇತರೆ: ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಇಲಾಖೆ ಅಥವಾ ಮಾಜಿ ಸೈನಿಕರಿಗೆ ಹಾಗೂ ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ.

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಯಾವುದೇ ಬೋಧನಾ ಶುಲ್ಕ ಇರುವುದಿಲ್ಲ.

ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್ ಓದಿಕೊಂಡು, ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವೇಶಾತಿ ಪಡೆಯಲು ಏಪ್ರಿಲ್ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ: 8800335638 / 8690544544 ಅಥವಾ ಮೊ.9986696487 ಗೆ ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ-583102. ವಿದ್ಯಾರ್ಥಿಗಳು ನೇರವಾಗಿ ಈ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕ ನಾಗೇಶ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ