Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಬಜೆಟ್ 2026–27: ಆಡಳಿತ ಸೇವೆಗಳ ಲಭ್ಯತೆಯ ಖಾತ್ರಿಗೆ ಸರ್ಕಾರದ ಒತ್ತು

ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಆಡಳಿತ ಸೇವೆಗಳನ್ನು ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಹಲವು ಪ್ರಮುಖ ಕ್ರಮಗಳನ್ನು ಘೋಷಿಸಿದೆ. ಭೂ ದಾಖಲೆಗಳ ಡಿಜಿಟಲೀಕರಣ, ನೋಂದಣಿ ವ್ಯವಸ್ಥೆಯ ಸುಧಾರಣೆ ಹಾಗೂ ಆಡಳಿತ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.
‘ಕರ್ನಾಟಕ ಲ್ಯಾಂಡ್ ಸ್ಟಾಕ್ ಯೋಜನೆ’ಯಡಿ ಭೂಮಿ, ಮೋಜಿಣಿ, ಕಾವೇರಿ, ಇ-ಸ್ವತ್ತು ಹಾಗೂ ಇ-ಆಸ್ತಿ ಪೋರ್ಟಲ್‌ಗಳಲ್ಲಿ ಇರುವ ಜಮೀನು ಮತ್ತು ಆಸ್ತಿ ಸಂಬಂಧಿತ ದತ್ತಾಂಶಗಳನ್ನು GIS ಆಧಾರಿತ ಡಿಜಿಟಲ್ ವೇದಿಕೆಯಲ್ಲಿ ಸಮಗ್ರವಾಗಿ ಸಂಗ್ರಹಿಸಿ ಏಕರೂಪದಲ್ಲಿ ದಾಖಲೆಗಳನ್ನು ನಿರ್ವಹಿಸುವ ಯೋಜನೆ ಕೈಗೊಳ್ಳಲಾಗುತ್ತದೆ.
ಇದೇ ವೇಳೆ 10ಕ್ಕೂ ಹೆಚ್ಚು ಇಲಾಖೆಗಳೊಂದಿಗೆ ಸಂಪರ್ಕ ಹೊಂದುವಂತೆ ‘ಭೂಮಿ-8.0’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಸುಮಾರು 50 ಕೋಟಿ ರೂ. ವೆಚ್ಚ ಮಾಡುವುದಾಗಿ ಘೋಷಿಸಲಾಗಿದೆ.
ಭೂಮಾಪನ ಇಲಾಖೆಯ ಮೂಲ ದಾಖಲೆಗಳು 160 ವರ್ಷಕ್ಕೂ ಹೆಚ್ಚು ಹಳೆಯದಾಗಿರುವ ಹಿನ್ನೆಲೆ, ಅವುಗಳನ್ನು ಸಂರಕ್ಷಿಸಲು ರಾಜ್ಯದ ಎಲ್ಲಾ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನವೀಕೃತ ಅಭಿಲೇಖಾಲಯಗಳನ್ನು 72 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ನೋಂದಣಿ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಹಾಗೂ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಲು 65 ಕೋಟಿ ರೂ. ವೆಚ್ಚದಲ್ಲಿ ‘ಕಾವೇರಿ 3.0’ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಇದರ ಜೊತೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ‘ಪ್ರಜಾಸೌಧ’ ಕಟ್ಟಡಗಳನ್ನು ನಿರ್ಮಿಸಲು ಸರ್ಕಾರ ಘೋಷಿಸಿದೆ. ಈ ಕ್ರಮಗಳಿಂದ ಆಡಳಿತ ಸೇವೆಗಳ ಲಭ್ಯತೆ ಹೆಚ್ಚಿಸಿ ನಾಗರಿಕರಿಗೆ ವೇಗವಾದ ಸೇವೆ ನೀಡುವ ಉದ್ದೇಶ ಹೊಂದಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ