ಕೊಪ್ಪಳ ಆಗಸ್ಟ್ 12: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕುಷ್ಟಗಿ/ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಿಗೆ ಸಂಬAಧಿಸಿದAತೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನುಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕುಗಳ ಮೂಲಕ ಸಾಲದ ಸೌಲಭ್ಯ ಒದಗಿಸಿ, ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ಮೀನುಕೃಷಿಕರು ಆಗಸ್ಟ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಕುಷ್ಟಗಿ/ಗಂಗಾವತಿ, ಕನಕಗಿರಿ, ಹಾಗೂ ಕಾರಟಗಿ ತಾಲೂಕುಗಳ ಮೀನುಗಾರರು/ಮೀನುಕೃಷಿಕರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಗಂಗಾವತಿ ರವರನ್ನು ಸಂಪರ್ಕಿಸಿ, ನಿಗದಿತ ನಮೂನೆಯಲ್ಲಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೀನುಗಾರಿಕೆ ಮಾಡುತ್ತಿರುವ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಿ, ಬ್ಯಾಂಕ್‌ಗಳಿಂದ ಆರ್ಥಿಕ ಸಹಾಯಧನ ಪಡೆಯಬಹುದಾಗಿದೆ ಎಂದು ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
