Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆ. ಎಸ್ ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ. ಕುಮಾರ


ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ನಮ್ಮ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.



ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೆ. ಎಸ್ ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸಭೆಯನ್ನು ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.



ಪ್ರಸ್ತುತ ಕೆ. ಎಸ್ ನರಸಿಂಹಸ್ವಾಮಿ ರವರ ಮನೆಯು ಮಾರಾಟವಾಗಿದೆ, ಮನೆಯ ಮಾಲೀಕರು ಮನೆಯನ್ನು ಬಿಟ್ಟುಕೊಡಲು ತಯಾರಾಗಿದ್ದು ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಲಾಗುವುದು ಎಂದು ಹೇಳಿದರು.



ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು, ಕೆ. ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.



*ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ*

ಕೆ . ಎಸ್. ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.



*ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ*

ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.



*ಸ್ವಾಗತ ಕಮಾನು*

ಕೆ. ಎಸ್. ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.



ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.



ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರುಗಳಾದ ತಿಮ್ಮರಾಜು, ಶ್ರೀನಿವಾಸ್, ಡಾ. ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ