Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ, ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಪೂರ್ವಭಾವಿ ಸಭೆ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್

ಬಳ್ಳಾರಿ,ಡಿ.20

ಜಿಲ್ಲಾಡಳಿತ ವತಿಯಿಂದ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು.
ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ಆಯಾ ದಿನದಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗುವುದು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಇತರೆ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಗೀನಗಾಯನ, ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ