ಧಾರವಾಡಜು.27: ಮಕ್ಕಳು ಒಂದು ರಾಷ್ಟ್ರದ ದೊಡ್ಡ ಶಕ್ತಿಯಾಗಿದ್ದು, ಪ್ರತಿಯೊಂದು ಮಗುವನ್ನು ಗೌರವ ಮತ್ತು ಆದರದಿಂದ ಕಾಣಬೇಕು. ಮಕ್ಕಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ತರಬೇತಿ ಕಾರ್ಯಾಗಾರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಕುರಿತು ಸಮರ್ಪಕ ಅರಿವು ಮೂಡಿಸುವ ಮೂಲಕ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಸಹಕರಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜೆಜೆಸಿ ಮತ್ತು ಪೆÇೀಕ್ಸೋ ಸಮಿತಿಯ ಅಧ್ಯಕ್ಷರಾದ ಎಸ್. ಸುನಿಲ್ ದತ್ ಯಾದವ್ ಅವರು ಹೇಳಿದರು.
ಅವರು ಇಂದು (ಜು.27) ಬೆಳಿಗ್ಗೆ ಬೇಲೂರು ಕೈಗಾರಿಕಾ ಪ್ರದೇಶದ ವಾಟರ್ ಅಂಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ನ ಆಡಿಟೋರಿಯಂದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮತ್ತು ನ್ಯಾಯ (ಓಉಔ) ಸಹಯೋಗದಲ್ಲಿ ಆಯೋಜಿಸಲಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಮಕ್ಕಳು, ಮಹಿಳೆಯರು ಮತ್ತು ಲೈಂಗಿಕ ಅಪರಾಧಗಳ ಸಂತ್ರಸ್ತರು, ವಿಕಲಚೇತನರು ಹಾಗೂ ಇತರ ಸಂವೇದನಾಶೀಲ ಸಾಕ್ಷಿಗಳು ಭಾಗಿಯಾಗಿರುವ ಪ್ರಕರಣಗಳಲ್ಲಿ ಸಂತ್ರಸ್ತರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಕಾನೂನು ನಡುವಳಿಯ ಗೌಪ್ಯತೆಯನ್ನು ಬೆಂಬಲ ವ್ಯಕ್ತಿಗಳು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಡಾ. ಸ್ನೇಹಾ ಸಿ.ವಿ ಅವರು ಮಾತನಾಡಿ, 15 ಮತ್ತು 16 ವರ್ಷದ ವಯಸ್ಸಿನಲ್ಲೇ ಮಕ್ಕಳಿಗೆ ಮಗು ಜನಿಸುವಂತಹ ಪ್ರಕರಣಗಳಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಶಿಕ್ಷೆ ವಿಧಿಸಿದರೆ, ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಸಾಧ್ಯ. ಮಗುವಿನ ಭವಿಷ್ಯಕ್ಕೆ ಅಗತ್ಯವಾದ ಬೆಂಬಲ ಒದಗಿಸುವುದು ಸಹ ಅμÉ್ಟೀ ಮುಖ್ಯವಾಗಿದೆ.
ಘಟನೆಯ ಕುರಿತು ಸೂಕ್ತ ತನಿಖೆ ನಡೆಸಲು ಅವಕಾಶ ನೀಡಬೇಕು ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಮಾತನಾಡಿ, ಮಕ್ಕಳ ಬಾಲ್ಯ, ಹಕ್ಕುಗಳು ಹಾಗೂ ರಕ್ಷಣೆಯ ಜವಾಬ್ದಾರಿ ಕೇವಲ ಪೆÇಲೀಸ್ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಲು ಎಲ್ಲರೂ ಜಾಗೃತರಾಗಬೇಕು. ಮಕ್ಕಳ ರಕ್ಷಣೆ ಹಾಗೂ ಅವರ ಸುರಕ್ಷತೆ ಕಾಪಾಡುವಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಮಕ್ಕಳನ್ನು ರಕ್ಷಿಸೋಣ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜೆಜೆಸಿ ಮತ್ತು ಪೆÇೀಕ್ಸೋ ಸಮಿತಿಯ ಸದಸ್ಯರಾದ ಎಚ್. ಟಿ. ನರೇಂದ್ರ ಪ್ರಸಾದ್ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅದ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ್ ಅವರು ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪೆÇ್ರಬೇಷನರ್ ಆಫೀಸರ್ ಮಹ್ಮದಲಿ. ಕೆ. ತಹಶೀಲ್ದಾರ ಅವರು ನಿರೂಪಿಸಿದರು. ಡಿಎಲ್ಎಸ್ಎ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ. ಎಂ. ಬಡಿಗೇರ ಅವರು ವಂದಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಜಾವೂರ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿ, ಹಿರಿಯ ನ್ಯಾಯಾಧೀಶರು, ಜಲ ಮತ್ತು ನಿರ್ವಹಣೆ ಸಂಸ್ಥೆಯ ಅಧಿಕಾರಿಗಳು, ವಕೀಲರು ಸೇರಿದಂತೆ ಬೆಂಬಲ ವ್ಯಕ್ತಿಗಳು ಇತರರು ಉಪಸ್ಥಿತರಿದ್ದರು.
