Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಅಪರಾಧ ಸುದ್ದಿ

ಅಂಗಡಿಗಳ ಬೀಗ ಮುರಿದು ಕಳವು: ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಬಂಧನ : ಸಾಹಿಲ್ ಬಾಗ್ಲಾ ======

ಕೊಪ್ಪಳ, ಸೆ.15 ನಗರದ ವಿವಿಧ ಕಿರಾಣಿ ಹಾಗೂ ಜನರಲ್ ಸ್ಟೋರ್‌ಗಳ ಬೀಗ ಮುರಿದು ಕಳವು ಹಾಗೂ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೊಬ್ಬನನ್ನು ಕೊಪ್ಪಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು, ಆತನಿಂದ ₹60 ಸಾವಿರ ನಗದು ಹಾಗೂ ಕಳವಿಗೆ ಬಳಸಿದ್ದ ಸ್ಕೂಟಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ ಅವರು ತಿಳಿಸಿದರು.
ಅವರು (ಸೆ.14) ಸೋಮವಾರದಂದು ಎಸ್ಪಿ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸೆಪ್ಟೆಂಬರ್ 6ರಂದು ರಾತ್ರಿ ನಗರದ ತೆಗ್ಗಿನಕೇರಿಯ ಮಂಡಲಗೇರಿ ಕಾಂಪ್ಲೆಕ್ಸ್‌ನಲ್ಲಿರುವ ವೆಂಕಟೇಶ್ವರ ಕಿರಾಣಿ ಸ್ಟೋರ್‌ನ ಶಟರ್ ಕೀಲಿ ಮುರಿದು ಒಳ ಪ್ರವೇಶಿಸಿದ ಕಳ್ಳರು, ಕಬೋರ್ಡ್‌ನಲ್ಲಿದ್ದ ರೂ. 2.30 ಲಕ್ಷ ನಗದು ಹಣವನ್ನು ಕಳವು ಮಾಡಿದ್ದರು.
ಅದೇ ರೀತಿ ಸೆಪ್ಟೆಂಬರ್ 11ರಂದು ಬೆಳಗು ಮುಂಜಾನೆ 4 ಗಂಟೆಗೆ ಜೆ.ಪಿ. ಮಾರ್ಕೆಟ್‌ನ ಶ್ರೀ ವೀರಭದ್ರೇಶ್ವರ ಕಿರಾಣಿ ಅಂಗಡಿ ಹಾಗೂ ಆರ್.ಆರ್. ಜನರಲ್ ಸ್ಟೋರ್‌ಗಳ ಬೀಗ ಮುರಿದು ನಗದು, ಬಾದಾಮಿ, ಏಲಕ್ಕಿ ಹಾಗೂ ರೂ.3000 ಹಾಗೂ ಒಂದು ಸ್ಯಾಮ್ಸಂಗ್ ಕಂಪನಿಯ ಗ್ಯಾಲಕ್ಸಿ ಮೊಬೈಲ್ ಎಸ್ -1 ಆಂಡ್ರಾಯ್ಡ್ ಮೊಬೈಲ್ ಸೇರಿದಂತೆ ಒಟ್ಟು 12,100 ರೂ. ಬೆಲೆ ಬಾಳುವ ವಿವಿಧ ವಸ್ತುಗಳನ್ನು ಕಳವು ಮಾಡಲಾಗಿತ್ತು. ನಗರದ ಮೆಹತಾ ಮಾರ್ಕೆಟ್, ಓಸಿಯಾ ಟ್ರೇಡರ್ಸ್ ಹಾಗೂ ಗೌರಿಶಂಕರ್ ಕಿರಾಣಿ ಅಂಗಡಿಗಳಲ್ಲಿಯೂ ಕಳವಿಗೆ ಯತ್ನಿಸಲಾಗಿತ್ತು.
ಈ ಸಂಬಂಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 121/2026 ಕಲಂ 331(4), 305 ಬಿಎನ್ ಎಸ್ ಹಾಗೂ ಗುನ್ನೆ ನಂಬರ್ 125/2026 ಕಲಂ 62,331(4), 305(5) ಬಿ ಎನ್ ಎಸ್ ರಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡು ಸೆಪ್ಟೆಂಬರ್ 13ರಂದು ಬೆಳಗಿನ ಜಾವ ಹೊಸಪೇಟೆಯ ಜಂಬುನಾಥ ರಸ್ತೆ ಬೈಪಾಸ್‌ನಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದು , ಅವರಿಂದ ₹60 ಸಾವಿರ ನಗದು ಹಾಗೂ ಕಳವಿಗೆ ಬಳಸಿದ್ದ ಸುಮಾರು ರೂ. 40 ಸಾವಿರ ಮೌಲ್ಯದ ಹೊಂಡಾ ಡಿಯೋ ಸ್ಕೂಟಿಯನ್ನು ಜಪ್ತಿ ಮಾಡಲಾಗಿದೆ.
ಬಾಲಕರನ್ನು ಕೊಪ್ಪಳ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ, ನ್ಯಾಯಾಲಯದ ಆದೇಶದಂತೆ ಬಳ್ಳಾರಿಯ ಬಾಲಕರ ಸರ್ಕಾರಿ ವೀಕ್ಷಣಾಲಯಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದರು.
ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಸಾಹಿಲ್ ಬಾಗ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೇಮಂತ್ ಕುಮಾರ್ ಹಾಗೂ ಡಿವೈಎಸ್‌ಪಿ ಮುತ್ತಣ್ಣ ಪಿ. ಸರವಗೋಳ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ ಡಿ., ಪಿಎಸ್‌ಐ ಹೀರಪ್ಪ ನಾಯಕ, ಪಿಎಸ್ಐ ರೇವಣ್ಣ ಗುರಿಕಾರ, ಸಿಬ್ಬಂದಿಯಾದ ಮಂಜುನಾಥ್ ಸಿಪಿಸಿ 22, ಮಂಗಳೇಶ ಸಿಪಿಸಿ 459, ಗೂಡಸಾಬ್ ಸಿಪಿಸಿ 175, ತನಿಕಾ ಸಹಾಯಕರಾದ ಹನುಮಂತ ಹಕಾರಿ ಸಿ ಎಚ್ ಸಿ 207, ಕುಮಾರಸ್ವಾಮಿ ಸಿಂಪಡಿಸಿ 604, ಲಕ್ಷ್ಮಿ ದೇವಿ ಕೆ ಮಪಿ ಸಿ 24, ಅಧಿಕಾರಿ ಮತ್ತು ಸಿಬ್ಬಂದಿ ಯವರು ಶ್ರಮಿಸಿದ್ದು, ಪೊಲೀಸ್ ಸಿಬ್ಬಂದಿಯ ತಂಡ ಈ ಪ್ರಕರಣವನ್ನು ಭೇದಿಸಿದೆ. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹೇಮಂತ್ ಕುಮಾರ್, ಪಿ.ಐ ಸುರೇಶ್ ಡಿ, ಪಿ.ಎಸ್.ಐ ರೇವಣ್ಣ ಗುರಿಕಾರ್ , ಸೇರಿದಂತೆ ಇತರೆ ಪೊಲೀಸ್ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ