Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ ತಾಲ್ಲೂಕಿನಲ್ಲಿ ಬರ ಅಧ್ಯಯನ ಸಮೀಕ್ಷೆ  ನಡೆಸಿದ ಸಚಿವ ಬಿ.ನಾಗೇಂದ್ರ


ಬಳ್ಳಾರಿ,ಆ.07
ಸಿರುಗುಪ್ಪ ತಾಲ್ಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಶುಕ್ರವಾರ ಬಳ್ಳಾರಿ ಜಿಲ್ಲಾ ಅತಿವೃಷ್ಠಿ ಮತ್ತು ಬರ ಪರಿಸ್ಥಿತಿ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು, ಸಮೀಪದ ಸಿದ್ದರಾಂಪುರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ರೈತರ ಜಮೀನುಗಳಲ್ಲಿ ಬೆಳೆದ ಬೆಳೆಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುತ್ತಿದ್ದು, ರೈತರಿಂದ ಬೆಳೆ ನಷ್ಟದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ಸಿದ್ದರಾಂಪುರ ಗ್ರಾಮದ ರೈತ ಮಹಿಳೆ ರಾಜೇಶ್ವರಮ್ಮ ಇವರ 3 ಎಕರೆಯಲ್ಲಿ ಬೆಳೆದ ಸಜ್ಜೆ ಬೆಳೆಯನ್ನು ಪರಿಶೀಲಿಸಿ ನಡೆಸಿ, ಸಜ್ಜೆ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಒಣಗಿರುವುದನ್ನು ಕಂಡು ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳಿಗೆ ರೈತರಿಗೆ ಬೆಳೆ ವಿಮೆ ಪಡೆಯಲು ಕ್ರಮ ವಹಿಸಲು ಸೂಚಿಸಿದರು.
ಸಿರುಗುಪ್ಪ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಮುಂಗಾರು ಹಂಗಾಮು ಸಂಪೂರ್ಣ ವಿಫಲಗೊಳ್ಳುವ ಭೀತಿ ಎದುರಾಗಿದೆ. ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಶೇ.25 ಕ್ಕಿಂತ ಕಡಿಮೆ ಬಿತ್ತನೆಯಾಗಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಬಿತ್ತನೆ ನಿಯಮದಡಿ ರೈತರಿಗೆ ರಕ್ಷಣೆ ಸಿಗಲಿದೆ ಎಂದು ತಿಳಿಸಿದರು.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾಗುವ ನಿರೀಕ್ಷೆ ಇದ್ದು, ಆದಷ್ಟು ಶೀಘ್ರವಾಗಿ ಕಾಲುವೆಗಳಿಗೆ ಬೆಳೆಗಾಗಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 
ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ ಅವರು ಮಾತನಾಡಿ, ಸಿರುಗುಪ್ಪ ತಾಲ್ಲೂಕಿನ ಹಚ್ಚೊಳ್ಳಿ ಹೋಬಳಿ ಹೊರತಾಗಿ ಉಳಿದೆಲ್ಲ ಹೋಬಳಿಗಳಲ್ಲಿ ಮಳೆಯ ಕೊರತೆಯಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗೆ ಅನುಕೂಲ ಕಲ್ಪಿಸುವ ಕ್ರಮ ವಹಿಸಲಾಗುವುದು ಎಂದರು.
ವಿವಿಧ ಸಂಘಟನೆಗಳ ರೈತರು ಹಾಗೂ ಗ್ರಾಮಸ್ಥರು ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ, ತೋಟಗಾರಿಕಾ ಜಂಟಿ ನಿರ್ದೇಶಕ ಶಶಿಕಾಂತ್, ತಹಶೀಲ್ದಾರ್ ಗೌಸಿಯಾ ಬೇಗಂ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ರೈತರು, ಸಾರ್ವಜನಿಕರು ಹಾಜರಿದ್ದರು. 
=====

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಳಪೆ ಬದನೆ ಸಸಿ ಮಾರಾಟ ಮಾಡಿದ ತಡಕೋಡದ* *ಕೆ.ಕೆ. ಅಗ್ರಿ ನರ್ಸರಿಗೆ 6 ಲಕ್ಷ 25 ಸಾವಿರ ರೂ. ದಂಡ ಮತ್ತು ಪರಿಹಾರಗುಡ್ಡ ಕುಸಿತ ದುರಂತ: ಮೃತ ಕುಟುಂಬದ ಇಬ್ಬರು ಪುತ್ರಿಯರಿಗೆ ತಲಾ 7.5 ಲಕ್ಷ ನೆರವು..! ಶಿಕ್ಷಣದ ಸಂಪೂರ್ಣ ಹೊಣೆ: ಸರಕಾರದಿಂದ ಮನೆ ನಿರ್ಮಿಸಿಕೊಡುವ ಭರವಸೆ..!ಸಿರುಗುಪ್ಪ ತಾಲ್ಲೂಕಿನಲ್ಲಿ ಬರ ಅಧ್ಯಯನ ಸಮೀಕ್ಷೆ  ನಡೆಸಿದ ಸಚಿವ ಬಿ.ನಾಗೇಂದ್ರಸಿಂಧಿಗೇರಿಯಲ್ಲಿ ಬೆಳೆ ಹಾನಿ ಪರಿವೀಕ್ಷಣೆ: ರೈತರ ಕೃಷಿ ಸಂಕಷ್ಟಗಳಿಗೆ ಸ್ಪಂದಿಸುವ ಭರವಸೆ ನೀಡಿದ ಸಚಿವ ಬಿ.ನಾಗೇಂದ್ರಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿವೀಕ್ಷಣೆ ನಡೆಸಿದ ಸಚಿವ ಬಿ.ನಾಗೇಂದ್ರ ಸoಡೂರು ತಾಲೂಕು ವ್ಯಾಪ್ತಿಯಲ್ಲಿ ಮೇವಿನ ಅಭಾವ ನಿಯಂತ್ರಣಕ್ಕೆ ಸೂಚನೆಬರ ಪರಿಸ್ಥಿತಿ, ಬೆಳೆ ಹಾನಿ ಕುರಿತು ಪ್ರಗತಿ ಪರಿಶೀಲನಾ ಸಭೆ ----- ಬೆಳೆ ಹಾನಿಯಿಂದ ನಷ್ಟದಲ್ಲಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ನೀಡಲು ಕ್ರಮ ವಹಿಸಿ: ಸಚಿವರಾದ ಶಿವರಾಜ ತಂಗಡಗಿಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಫಲಾನುಭವಿಗಳಿಂದ ಅರ್ಜಿ ಆಹ್ವಾನಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ ------- ಬಾಲ್ಯ ವಿವಾಹ ನಿಷೇಧ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾ. ಮಹಾಂತೇಶ್ ಎಸ್. ದರಗದ್ಬರ ವೀಕ್ಷಣೆಯೊಂದಿಗೆ ಜಿಲ್ಲೆಯಲ್ಲಿ ಪುನಃ ಕಾರ್ಯಾರಂಭಿಸಿದ ಸಚಿವರು * ಮತ್ತೊಮ್ಮೆ ಸಚಿವರಾಗಿ ತವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವರಿಗೆ ಅದ್ದೂರಿ ಸ್ವಾಗತ ------ ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಹಾನಿ ಖುದ್ದು ಪರಿಶೀಲಿಸಿದ ಸಚಿವರಾದ ಶಿವರಾಜ ತಂಗಡಗಿವಸತಿ ಶಾಲೆಗಳ 6ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ