Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ

ಬಳ್ಳಾರಿ,ಮೇ 21
ಸಂಡೂರು ತಾಲ್ಲೂಕಿನ ಸುಲ್ತಾನಪುರ ಗ್ರಾಮದ ನಿವಾಸಿ ಉಮಾದೇವಿ (34 ವರ್ಷ) ಹಾಗೂ ಅವರ ಮಕ್ಕಳಾದ ಜಯಶ್ರೀ (14 ವರ್ಷ), ನಾಗರತ್ನ (10 ವರ್ಷ) ಎಂಬುವವರು ಮೇ 15ರಂದು ಕಾಣೆಯಾಗಿದ್ದು, ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ.
*ನಾಪತ್ತೆಯಾದವರ ಚಹರೆ ಗುರುತು:*
*ಉಮಾದೇವಿ:* ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೊರಡುವಾಗ ಕಡು ನೀಲಿ ಬಣ್ಣದ ಸೀರೆ ಹಾಗೂ ಕುಪ್ಪಸ ಧರಿಸಿದ್ದರು. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.
*ಎಸ್.ಜಯಶ್ರೀ:* ದುಂಡು ಮುಖ, ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಗುಲಾಬಿ ಬಣ್ಣದ ಪ್ರಾಕ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
*ಎಸ್.ನಾಗರತ್ನ:* ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಟಿ-ಶರ್ಟ್, ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮಹಿಳೆ ಮತ್ತು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಬಳ್ಳಾರಿ ಎಸ್.ಪಿ ಕಚೇರಿ ದೂ.08392-258100, ತೋರಣಗಲ್ಲು ಡಿ.ಎಸ್.ಪಿ ಮೊ.9480803010, ಕುರುಗೋಡು ವೃತ್ತ ಸಿಪಿಐ ಮೊ.9480803039, ಕುಡುತಿನಿ ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803078 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ