Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಅಣಕು ಯುವ ಸಂಸತ್ ಆಯೋಜನೆ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ : ಅಕ್ಟೋಬರ್‌ 16 :  : ವಿದ್ಯಾರ್ಥಿಗಳಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಅರಿವು ಮೂಡಿಸುವುದು, ನಾಯಕತ್ವದ ಗುಣಗಳನ್ನು ಬೆಳೆಸುವುದು ಮತ್ತು ಭವಿಷ್ಯದ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಯುವ ಸಂಸತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಣಕು ಯುವ ಸಂಸತ್‌ ಸ್ಪರ್ಧೆಯನ್ನು ಆಯೋಜಿಸುವ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿಶೇಷವಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿಸಲಾಗುವ ಈ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಶೈಕ್ಷಣಿಕ ಚಟುವಟಿಕೆಯ ಭಾಗವೂ ಆಗಿದೆ ಎಂದವರು ನುಡಿದರು.
ಅಲ್ಲದೇ ವಿದ್ಯಾರ್ಥಿಗಳಲ್ಲಿ ಭಾರತದ ಸಂವಿಧಾನ, ಸಂಸದೀಯ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ತಿಳಿವಳಿಕೆ ಮೂಡಿಸುವುದಲ್ಲದೇ, ಲೋಕಸಭೆ ಮತ್ತು ವಿಧಾನಸಭೆಗಳ ಕಲಾಪಗಳ ಸಂಸದೀಯ ಕಾರ್ಯವಿಧಾನದ ಪರಿಚಯವಾಗಲಿದೆ. ಈ ಚಟುವಟಿಕೆ ವಿದ್ಯಾರ್ಥಿಗಳಲ್ಲಿ ನಾಯಕತ್ವ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಮತ್ತು ಸಂಘಟನಾ ಕೌಶಲ ಬೆಳೆಸುವುದು, ಮಾತಿನ ಜಾಣ್ಮೆ, ಚತುರತೆ ಮತ್ತು ಸಂವಹನ ಕೌಶಲದ ಪರಿಚಯವಾಗಲಿದೆ ಎಂದರು.
ಅಣಕು ಯುವ ಸಂಸತ್‌ನಲ್ಲಿ ವಿಷಯಾಧಾರಿತ ಚರ್ಚೆ, ಭಾಷಣ, ಪ್ರಶ್ನೋತ್ತರ ಮತ್ತು ತಾರ್ಕಿಕ ಮಂಡನೆಗೆ ಅವಕಾಶ ಕಲ್ಪಿಸಲಾಗುವುದು. ಸಮಾನತೆ, ಸಹಿಷ್ಣುತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವ ಮುಂತಾದ ಸಂವಿಧಾನಾತ್ಮಕ ಮೌಲ್ಯಗಳನ್ನು ಗೌರವಿಸುವ ಬಗ್ಗೆ, ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುವ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳೆಸುವ ಮೂಲಕ ಜವಾಬ್ದಾರಿಯುತ ನಾಗರಿಕರ ನಿರ್ಮಾಣ ಮಾಡುವಲ್ಲಿ ಹಾಗೂ ಪ್ರಚಲಿತ ವಿದ್ಯಮಾನಗಳು, ಸಾಮಾಜಿಕ ಸಮಸ್ಯೆಗಳು ಮತ್ತು ಸರ್ಕಾರದ ನೀತಿಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ವೃದ್ಧಿಸುವಲ್ಲಿ ವಿಮರ್ಶಾತ್ಮಕ ಮನೋಭಾವ ಬೆಳೆಸಲಿದೆ ಎಂದರು.
ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಮೂಲಕವಷ್ಟೇ ಅಲ್ಲದೆ ಪ್ರಾಯೋಗಿಕ ಚಟುವಟಿಕೆಗಳ ಮೂಲಕವೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಯುವಜನರಲ್ಲಿ ಸಾರ್ವಜನಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ, ಭವಿಷ್ಯದಲ್ಲಿ ಜವಾಬ್ದಾರಿಯುತ ನಾಯಕತ್ವ ವಹಿಸಲು ಪ್ರೇರೇಪಿಸುವಲ್ಲಿ ಯುವ ಸಂಸತ್ ಮಹತ್ವದ ವೇದಿಕೆಯಾಗಿದೆ ಎಂದವರು ನುಡಿದರು.
ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ಅಣಕು ಯುವ ಸಂಸತ್ ಸ್ಪರ್ಧೆಗಳನ್ನು ಸರ್ಕಾರದ ಮಾರ್ಗಸೂಚಿಯನುಸಾರ ಶೀಘ್ರದಲ್ಲಿ ದಿನಾಂಕ ಮತ್ತು ಸಮಯ ನಿಗಧಿಪಡಿಸಲಾಗುವುದು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಪ್ರತಿ ತಾಲೂಕಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅದಕ್ಕೂ ಮುನ್ನ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗುವ ಸ್ಪರ್ಧೆಯಲ್ಲಿ ವಿಜೇತರಾದ ಯುವ ಸಂಸತ್‌ನಲ್ಲಿ ವಿಜೇತ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದ ಅವರು ಕಾರ್ಯಕ್ರಮದಲ್ಲಿ ಸಂಸತ್ ಮತ್ತು ವಿಧಾನಮಂಡಲದ ಪರಿಚಯ, ರಾಜ್ಯಪಾಲ, ಮುಖ್ಯಮಂತ್ರಿ, ಸ್ಪೀಕರ್ ಮತ್ತು ಸಚಿವರ ಪಾತ್ರಗಳ ವಿವರಣೆ, ಕಲಾಪಗಳ ಪ್ರಾತ್ಯಕ್ಷಿಕೆ, ಪ್ರಶ್ನೋತ್ತರ ಅವಧಿ ಮತ್ತು ಸರಳ ಚರ್ಚೆಗಳ ಆಯೋಜನೆ, ಪ್ರಚಲಿತ ವಿದ್ಯಾಮಾನಗಳು, ಜಿಲ್ಲೆಯಲ್ಲಿ ಪ್ರಮುಖ ಹಾಗೂ ಜ್ವಲಂತ ಸಮಸ್ಯೆಗಳು, ಅದರಲ್ಲೂ ವಿಶೇಷವಾಗಿ ಕಸ್ತೂರಿ ರಂಗನ್‌ವರದಿ, ಪ್ರಸ್ತುತತೆ, ಚುನಾವಣಾ ಪ್ರಕ್ರಿಯೆಗಳ ಸುಧಾರಣೆ ಮತ್ತು ದೇಶದ ಆರ್ಥಿಕ ಪ್ರಗತಿಯಲ್ಲಿ ಜಿಲ್ಲೆಯ ಕೊಡುಗೆ, ನಿರುದ್ಯೋಗ, ಶಿಕ್ಷಣದ ಗುಣಮಟ್ಟ, ಡಿಜಿಟಲ್ ತಂತ್ರಜ್ಞಾನ, ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಪರಿಸರ ಸಂರಕ್ಷಣೆಯಂತಹ ವಿಷಯಗಳ ಚರ್ಚೆಗೆ ಅವಕಾಶ ಒದಗಿಸಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹಕಾರ ಮತ್ತು ಸಾರ್ವಜನಿಕ ಹೊಣೆಗಾರಿಕೆಯ ಅರಿವು ಮೂಡಲಿದೆ ಎಂದವರು ನುಡಿದರು.
ಈ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದ ಅವರು, ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ., ಉಪವಿಭಾಗಾಧಿಕಾರಿ ಡಾ.ಮೈತ್ರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರಸ್ವಾಮಿ ಜಿ. ಸೇರಿದಂತೆ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣ ಸಂಯೋಜಕರು ಉಪಸ್ಥಿತರಿದ್ದರು

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಅಣಕು ಯುವ ಸಂಸತ್ ಆಯೋಜನೆ : ಪ್ರಭುಲಿಂಗ ಕವಳಿಕಟ್ಟಿಮಾಜಿ ಸೈನಿಕರಿಗೆ ಸ್ಪರ್ಶ್ ಸಹಾಯತಾ ಶಿಬಿರ ಆಯೋಜನೆಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ : ಬೇಳೂರು ಗೋಪಾಲಕೃಷ್ಣಏಷ್ಯನ್ ಪ್ಯಾರಾ ಗೇಮ್ಸ್ಗೆ ಬಳ್ಳಾರಿಯ ಈಜುಪಟು ಗೋಪಿಚಂದ್ ಲಿಂಗುಟ್ಲ ಆಯ್ಕೆಬಳ್ಳಾರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಜಾನುವಾರು ರಕ್ಷಣೆ ಮತ್ತು ಮೇವು ಪೂರೈಕೆಗೆ ಜಿಲ್ಲಾಡಳಿತದಿಂದ ಸಮರೋಪಾದಿ ಕ್ರಮ – ಸಾರ್ವಜನಿಕರಿಗೆ ಧೈರ್ಯ ತುಂಬಿದ ಜಿಲ್ಲಾಡಳಿತಬಳ್ಳಾರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಜಾನುವಾರು ರಕ್ಷಣೆ ಮತ್ತು ಮೇವು ಪೂರೈಕೆಗೆ ಜಿಲ್ಲಾಡಳಿತದಿಂದ ಸಮರೋಪಾದಿ ಕ್ರಮ – ಸಾರ್ವಜನಿಕರಿಗೆ ಧೈರ್ಯ ತುಂಬಿದ ಜಿಲ್ಲಾಡಳಿತಹಗರಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಆಹಾರ ದಿನಾಚರಣೆ ಉತ್ತಮ ಆರೋಗ್ಯಕ್ಕೆ ಹಾಲಿನ ಉತ್ಪನ್ನಗಳ ಸಮತೋಲಿತ ಸೇವನೆ ಅಗತ್ಯ: ಡಾ.ರಮೇಶ್ ಬಿ.ಕೆ.ಬಳ್ಳಾರಿ: ಕುಡಿಯುವ ನೀರಿನ ಅಭಾವ ತಡೆಗೆ ಜಿಲ್ಲಾಡಳಿತ ಸನ್ನದ್ಧ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ- ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆತುಮಟಿ ಗ್ರಾಮದಲ್ಲಿ ಐಸಿಎಆರ್‌ನಿಂದ ‘ಮಹಿಳಾ ರೈತರ ದಿನಾಚರಣೆ': ಸಾಧಕ ಮಹಿಳಾ ರೈತರಿಗೆ ಸನ್ಮಾನ ಕೃಷಿ ಉದ್ಯಮಗಳಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಾ. ರಮೇಶ ಎಂ.ಎನ್ಸಂಡೂರು: ಮಿನೇರಾ ಸ್ಟೀಲ್ ಪರಿಸರ ಸಾರ್ವಜನಿಕ ಆಲಿಕೆ ಸಭೆ ನವೆಂಬರ್ 19ಕ್ಕೆ ಮುಂದೂಡಿಕೆ