Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆಎನ್.ಡಿ.ಆರ್.ಎಫ್ ತಂಡ : ಜಿಲ್ಲಾಧಿಕಾರಿ

ಕಾರವಾರ. ಜು.04:- ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿAದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಈ ಎನ್.ಡಿ.ಆರ್.ಎಫ್ ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮುಟಾ ಮತ್ತು ಅಂಕೋಲ ಭಾಗದಲ್ಲಿ ನಿಯೋಜಿಸಲಾಗುವುದು.



ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4 , ಕುಮಟಾ ದಲ್ಲಿ 2 ಮತ್ತು ಅಂಕೋಲದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230 ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ದಪಟ್ಟ ತಾಲೂಕುಗಳ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.



ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿAದ ಆರೋಗ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24*7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.



ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು , ಈ ಪ್ರದೇಶಗಳ ಮೇಲೆ ನಿರಂತರ ನಿಗಾವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸರ್ಷಕಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.



ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜಿವ ಹಾನಿ ಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಲಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತ ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 9483511015 ಕರೆ , ಮೆಸೆಜ್, ವಾಟ್ಪಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ