Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕೇಂದ್ರಗಳಿಗೆ ನ್ಯಾ. ಎಂ. ವಿಜಯ ಅನಿರೀಕ್ಷಿತ ಭೇಟಿ : ಅಸಮಾಧಾನ ವ್ಯಕ್ತ

ಚಿತ್ರದುರ್ಗ ಜು. 22 

ಚಿತ್ರದುರ್ಗ ತಾಲ್ಲೂಕು ಮಾಡನಾಯಕನಹಳ್ಳಿಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಸೋಮವಾರದಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕರ್ನಾಟಕ ಉಚ್ಛ ನ್ಯಾಯಲಯ, ಬೆಂಗಳೂರು ಅವರು ರಿಟ್ ಅರ್ಜಿ ಸಂಖ್ಯೆ 38157/2011 ರನ್ವಯ ಚಿತ್ರದುರ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಭೇಟಿ ನೀಡಿ, ಅಲ್ಲಿನ ಕಟ್ಟಡ ಪರಿಸ್ಥಿತಿ ಹಾಗೂ ಪೌಷ್ಠಿಕ ಆಹಾರ ಪೂರೈಕೆ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿರುತ್ತಾರೆ. ಅದರನ್ವಯ ನ್ಯಾ. ಎಂ. ವಿಜಯ್ ಅವರು ತಾಲ್ಲೂಕಿನ ಮಾಡನಾಯಕನಹಳ್ಳಿ ಗ್ರಾಮದ ಎ. ಬಿ ಮತ್ತು ಸಿ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಖಾಸಗಿ ಕಟ್ಟಡದಲ್ಲಿರುವ ಅಂಗನವಾಡಿಗೆ ನಿಯಮಾನುಸಾರ ಸೂಕ್ತ ಮೂಲಭೂತ ಸೌಕರ್ಯ ಒದಗಿಸಿಲ್ಲ, ಅಂಗನವಾಡಿ ಕೇಂದ್ರದ ಒಳಗೇ ಶೌಚಾಲಯ ನಿರ್ಮಿಸಿರುವುದು ಕೂಡ ಸರಿಯಾದುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಗ್ರಾಮದ ಬಿ ಮತ್ತು ಸಿ ಅಂಗನವಾಡಿ ಕೇಂದ್ರದ ಕಟ್ಟಡಗಳು, ಅಂಗನವಾಡಿ ನಡೆಸಲು ಸುರಕ್ಷಿತ ಇರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇವರ ಗಮನಕ್ಕೆ ತರಲಾಗಿದೆ ಎಂಬುದಾಗಿ ನ್ಯಾ. ಎಂ. ವಿಜಯ್ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ