ಕೊಪ್ಪಳ, ಸೆ.28: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಗವಿಸಿದ್ದೇಶ್ವರ ಶ್ರೀಗಳನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಸೋಮವಾರ ಫಲಪುಷ್ಪ ನೀಡಿ ಅಧಿಕೃತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.