Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ.30 ರಂದು ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮ





ಬಳ್ಳಾರಿ,ಏ.28

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಹಾಮಾನವತಾವಾದಿ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಏ.30 ರಂದು ಸಂಜೆ 7.30 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡಗೌಡ ರಂಗಮ0ದಿರದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ರಾಷ್ಟಿಯ ಬಸವದಳದ ಗೌರವಾಧ್ಯಕ್ಷ ಸಿರಿಗೇರಿ ಪನ್ನರಾಜ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಳ್ಳಾರಿಯ ಬಸವತತ್ವ ಚಿಂತಕರಾದ ಡಾ.ರವಿಶಂಕರ್ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಕೆ.ದೊಡ್ಡಬಸವ ಗವಾಯಿ ಅವರಿಂದ ವಚನ ಸಂಗೀತ ಇರಲಿದೆ.

*ಮೆರವಣಿಗೆ:*

ಜಯಂತಿ ಅಂಗವಾಗಿ ಅಂದು ಸಂಜೆ 4.30 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮೈದಾನ-ಗಡಿಗಿ ಚನ್ನಪ ವೃತ್ತ-ಬೆಂಗಳೂರು ರಸ್ತೆ -ಹಳೆ ಬ್ರೂಸ್ ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದವರೆಗೆ ಮೆರವಣಿಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ