Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟರ್ನ್ ಕೀ ಹಾಲಿಡೇಸ್ ಸೇವಾನ್ಯೂನತೆ; ಪರಿಹಾರ ನೀಡಲು ಆಯೋಗದಿಂದ ಆದೇಶ



ಶಿವಮೊಗ್ಗ, ಏಪ್ರಿಲ್. 24: ಶಿವಮೊಗ್ಗ ಹೊನ್ನಾಳಿ ರಸ್ತೆ, ಮಲ್ಲಿಕಾರ್ಜುನ ನಗರದ ಎಂ.ಕೆ. ದಿವಾಕರ್ ಎಂಬುವವರು ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ನ ಟರ್ನ್ ಕೀ ಹಾಲಿಡೇಸ್ ಪ್ರವಾಸಿ ಸಂಸ್ಥೆಯ ವಿರುದ್ಧ ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ವಕೀಲರ ಮೂಲಕ ನೀಡಿದ ದೂರಿನ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಹಣವನ್ನು ಹಿಂದುರುಗಿಸುವಂತೆ ಎದುರುದಾರರಿಗೆ ಆದೇಶಿಸಿ ತೀರ್ಪು ನೀಡಿದೆ.

ದೂರುದಾರರು ಎದುರುದಾರರಲ್ಲಿ ಜಪಾನ್ ಮತ್ತು ಸೌತ್ ಕೋರಿಯ ದೇಶಗಳಿಗೆ 10 ದಿನಗಳ ಪ್ರವಾಸಕ್ಕಾಗಿ ನೋಂದಣಿ ಮಾಡಿಸಿದ್ದು, ಏಪ್ರಿಲ್ 2025ರಲ್ಲಿ ಪ್ರವಾಸ ನಿಗಧಿಯಾಗಿದ್ದು ಪ್ರವಾಸದ ಮೊತ್ತ 4,09,865/- ಗಳನ್ನು ಹಂತ ಹಂತವಾಗಿ ಪಾವತಿಸಿರುತ್ತಾರೆ. ಮಾರ್ಚ್-2025ರಲ್ಲಿ ದೂರದಾರರಿಗೆ ಅಫಘಾತವಾಗಿದ್ದು ಕಾಲು ಮುರಿದುಹೋಗಿದ್ದು, ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸಲಹೆ ನೀಡಿದ್ದರಿಂದ ಪ್ರವಾಸ ಹೋಗಲು ಸಾಧ್ಯವಾಗದೆ ರದ್ದು ಮಾಡಿ, ಪಾವತಿಸಿದ ಹಣವನ್ನು ವಾಪಸು ಮಾಡಲು ಕೋರಿ ಪತ್ರ ಬರೆದಿರುತ್ತಾರೆ. ಸಂಸ್ಥೆಯು ವಿವಿಧ ಸಂಸ್ಥೆಗಳಿಂದ ಪಡೆದಿರುವ ರೀಫಂಡ್ ಮೊತ್ತ ರೂ. 2,52,000/-ಗಳನ್ನು ಜುಲೈ 2025ರೊಳಗೆ ಇದೇ ತೆರನಾದ ಯಾವುದಾದರೂ ಪ್ರವಾಸಕ್ಕೆ ಬಂದಲ್ಲಿ ಹೊಂದಾಣಿಕೆ ಮಾಡುವುದಾಗಿ ತಿಳಿಸಿರುತ್ತಾರೆ. ಆದರೆ ದೂರದಾರರು ಮೊತ್ತವನ್ನು ವಾಪಾಸ್ಸು ನೀಡಲು ಲೀಗಲ್ ನೋಟೀಸ್ ನೀಡಿದ್ದು, ಅದಕ್ಕೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.

ಆಯೋಗವು ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ಆಯೋಗಕ್ಕೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದು, ಎರಡೂ ಪಕ್ಷಗಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ವಾದ ವಿವಾದವನ್ನು ಆಲಿಸಿ, ಎದುರುದಾರರು ದೂರದಾರರ ಪ್ರವಾಸಕ್ಕೆ ನೀಡಿದ ಮೊತ್ತವನ್ನು ಹಿಂತಿರುಗಿಸದೆ ಬೇರೆ ಪ್ರವಾಸಕ್ಕೆ ಹೊಂದಾಣಿಕೆ ಮಾಡುತ್ತೇವೆ ಎಂಬುದು ಸಹಾ ಸೇವಾನ್ಯೂನ್ಯತೆಯಾಗುತ್ತದೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿದೆ. ಎದುರುದಾರರು ದೂರುದಾರರಿಗೆ ನೀಡಬೇಕಾಗಿದ್ದ ರೂ.2.52 ಲಕ್ಷಗಳಿಗೆ ದಿ: 28/05/2025 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8ರ ಬಡ್ಡಿಯನ್ನು ಸೇರಿಸಿ, ಈ ಆದೇಶವಾದ 45 ದಿನಗಳೊಳಗೆ ಪಾವತಿಸುವುದು ಹಾಗೂ ರೂ. 10,000/- ಗಳನ್ನು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಏ.18 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ