Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡುಗೆ ತಯಾರಿಸುವಾಗ ಶುಚಿತ್ವದ ಬಗ್ಗೆ ಗಮನ ಹರಿಸಿ: ಡಿ.ಎಚ್.ಓ ಡಾ.ಸುರೇಂದ್ರಬಾಬು

ರಾಯಚೂರು,ಮೇ.29 ವಸತಿ ನಿಲಯದ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಯಲ್ಲಿ ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಡಿ.ಗ್ರೂಪ್ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಡುಗೆ ತಯಾರಿಸುವಾಗ ಶುಚಿತ್ವದ ಬಗ್ಗೆ ಹೆಚ್ಚಿನ ಗಮನಹರಿಸುವುದು ಸಿಬ್ಬಂದಿಗಳ ಮತ್ತು ಪ್ರತಿಯೊಬ್ಬರ ಜವಾಬ್ದಾರಿಯಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ಹೇಳಿದರು.

ಅವರು ಮೇ.29ರ(ಬುಧವಾರ) ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಖಾಯಂ ಹಾಗೂ ಹೊರಗುತ್ತಿಗೆ ಡಿ.ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡುವ ಕುರಿತು ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಸ್ವಚ್ಛತೆಯನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದ್ದು, ಸ್ವಚ್ಛವಾದ, ಶುಚಿಯಾದ ಮತ್ತು ಬಿಸಿ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಿದ್ದಲ್ಲಿ ಅವರ ಆರೋಗ್ಯವು ಉತ್ತಮವಾಗಿರುತ್ತದೆ. ಅಡುಗೆ ಹಾಗೂ ಡಿ.ಗ್ರೂಪ್ ಸಿಬ್ಬಂದಿ ಮೊದಲು ವೈಯಕ್ತಿಕ ಸ್ವಚ್ಛತೆಯನ್ನು ನೋಡಿಕೊಂಡು ಕರ್ತವ್ಯ ನಿರ್ವಹಿಸುವ ಸ್ಥಳದಲ್ಲಿಯೂ ಸ್ವಚ್ಛತೆಯನ್ನು ಕಾಪಾಡಲು ಮುಂದಾಗಬೇಕು ಎಂದರು.

ಇದೇ ವೇಳೆ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿ ಮತ್ತು ಡಿ.ಗ್ರೂಪ್ ಸಿಬ್ಬಂದಿ ಸ್ವಚ್ಛತೆಯ ಕುರಿತು ಕಾರ್ಯಾಗಾರದಲ್ಲಿ ನೀಡಲಾಗುವ ಸಲಹೆ ಸೂಚನೆಗಳನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಂಡು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ನಂತರ ವರ್ಚುವಲ್ ಮೂಲಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ.ಕಲ್ಲೇಶ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಬಡಸುವುದು ಅತ್ಯಂತ ಜವಾಬ್ದಾರಿಯುತವಾದ ಕೆಲಸವಾಗಿದ್ದು, ನಿಟ್ಟಿನಲ್ಲಿ ಸಿಬ್ಬಂದಿಗಳು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕು ವಸತಿ ನಿಲಯದಲ್ಲಿರುವ ಶೌಚಾಲಯ ಮತ್ತು ಕೋಣೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು ವಿಡಿಯೋ ವಚುವಲ್ ಮೂಲಕ ಇಲಾಖೆಯ ಉಪನಿರ್ದೇಶಕ ರಾಜಕುಮಾರ ಅವರು ಇದ್ದರು.

ಇದೇ ವೇಳೆ ಹಿರಿಯ ಸಿಬ್ಬಂದಿ ಹಾಗೂ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಸಿಬ್ಬಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಅಕ್ಷರ ದಾಸೋಹ ಅಧಿಕಾರಿ ಈರಣ್ಣ ಕೋಸಗಿ, ಅಗ್ನಿಶಾಮಕದಳದ ಅಧಿಕಾರಿ ಖಾಸಿಂ ಸಾಬ್, ಅಧಿಕಾರಿಗಳಾದ ವಿಜಯಲಕ್ಷಿö್ಮ, ರುಕ್ಮಿಣಿಬಾಯಿ, ಮಂಜುಳಾ, ರಾಘವೇಂದ್ರ, ಮಹಾಲಿಂಗಪ್ಪ, ಶರಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ