Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾ ಪರಿಹಾರ ನೀಡದ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗೆ ದಂಡ 


ಶಿವಮೊಗ್ಗ, ಆ, 11
ಖಾತೆಯಲ್ಲಿ ಹಣವಿದ್ದರೂ ಆಟೋ ಡೆಬಿಟ್ ಮೂಲಕ ವಿಮಾ ಕಂತು ಪಾವತಿಸಿಕೊಳ್ಳದೆ, ನೋಟೀಸ್ ನೀಡದೆ ವಿಮಾ ಪಾಲಿಸಿ ರದ್ದುಗೊಳಿಸಿ ಸೇವಾ ನ್ಯೂನತೆ ಎಸಗಿದ್ದ ಕೆನರಾ ಬ್ಯಾಂಕ್ ಹಾಗೂ ಕೆನರಾ ಹೆಚ್‌ಎಸ್‌ಬಿಸಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಲೈಫ್ ಇನ್ಶೂರೆನ್ಸ್ ಕಂಪನಿಗೆ  ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಹಾರ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
      ಶಿವಮೊಗ್ಗದ ಬಾರಂಗಿ ನಿವಾಸಿ ಸುಮ ಕೋಂ ಲೇಟ್ ನಟರಾಜನಾಯ್ಕ ಎಂಬುವರು ತಮ್ಮ ವಕೀಲರ ಮೂಲಕ ವಿಮಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕೆನರಾ ಬ್ಯಾಂಕ್ ಸೊರಬ ಶಾಖೆಯ ವ್ಯವಸ್ಥಾಪಕರ ವಿರುದ್ಧ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಸದರಿ ದೂರುದಾರರ ಪತಿ ನಟರಾಜನಾಯ್ಕ ಅವರು 'ಕೆನರಾ ಜೀವ ಭೀಮಾ ಸ್ಮಾರ್ಟ್ ಸುರಕ್ಷಾ ಪ್ಲಾನ್' ಅಡಿಯಲ್ಲಿ ವಿಮಾ ಪಾಲಿಸಿ ಪಡೆದಿದ್ದರು. ವಾರ್ಷಿಕ ಕಂತು ರೂ.7,854.80 ಅನ್ನು ದೂರುದಾರರ ಖಾತೆಯಿಂದ 'ಆಟೋ ಡೆಬಿಟ್' ಮೂಲಕ ಜಮಾ ಮಾಡಿಕೊಳ್ಳಬೇಕಾಗಿತ್ತು. ಆದರೆ 21/01/2023 ರಂದು ಖಾತೆಯಲ್ಲಿ ಹಣವಿಲ್ಲದ ಕಾರಣ ಕಂತು ಪಾವತಿಯಾಗಿರಲಿಲ್ಲ. ತದನಂತರ ಖಾತೆಗೆ ವೇತನದ ಹಣ ಜಮೆಯಾಗಿದ್ದರೂ ಬ್ಯಾಂಕಿನವರು ಕಂತಿನ ಹಣವನ್ನು ಡೆಬಿಟ್ ಮಾಡಿಕೊಳ್ಳಲು ವಿಫಲರಾಗಿದ್ದರು.
ಈ ನಡುವೆ ದಿನಾಂಕ 24/05/2023 ರಂದು ವಿಮೆದಾರ ನಟರಾಜನಾಯ್ಕ ನಿಧನ ಹೊಂದಿದ್ದರು. ದೂರುದಾರರು ವಿಮಾ ಹಣಕ್ಕೆ ಕೋರಿಕೆ ಸಲ್ಲಿಸಿದಾಗ, ವಿಮಾ ಪಾಲಿಸಿಯು ರದ್ದಾಗಿದೆ ಎಂದು ತಿಳಿಸಲಾಗಿತ್ತು. ಯಾವುದೇ ಮುನ್ಸೂಚನೆ ಅಥವಾ ನೋಟೀಸ್ ನೀಡದೆ ಪಾಲಿಸಿ ರದ್ದುಗೊಳಿಸಿರುವುದು ಸೇವಾ ನ್ಯೂನತೆ ಎಂದು ಆರೋಪಿಸಿ ಪತ್ನಿ ಸುಮ ಅವರು ಗ್ರಾಹಕ ಆಯೋಗದ ಮೆಟ್ಟಿಲೇರಿದ್ದರು.
ಆಯೋಗದ ತೀರ್ಪು:
ದೂರು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಆಯೋಗವು, ವಿಮಾ ಸಂಸ್ಥೆ ಮತ್ತು ಬ್ಯಾಂಕ್‌ನಿಂದ ಸೇವಾ ನ್ಯೂನತೆಯಾಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿತು.
ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಅವರನ್ನೊಳಗೊಂಡ ಪೀಠವು ಈ ಕೆಳಗಿನಂತೆ ಆದೇಶಿಸಿದೆ:
     ಪಾಲಿಸಿಯ ಫಲವತ್ತೆಯ ಮೊತ್ತ ರೂ. 20,00,000 (ಇಪ್ಪತ್ತು ಲಕ್ಷ ರೂ.) ಅನ್ನು ದಿನಾಂಕ 04/07/2023 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಶೇ. 10 ರಷ್ಟು ಬಡ್ಡಿ ಪಾವತಿಸಬೇಕಾಗುತ್ತದೆ. 
ಮಾನಸಿಕ ಕಿರುಕುಳಕ್ಕೆ ಪರಿಹಾರ: ದೂರುದಾರರಿಗೆ ಉಂಟಾದ ಮಾನಸಿಕ ಹಿಂಸೆಗೆ ರೂ. 50,000/- ದಂಡ. 
ದೂರಿನ ವೆಚ್ಚ: ದೂರಿನ ಖರ್ಚಿಗಾಗಿ ರೂ.10,000/- ಪಾವತಿಸಲು ಆದೇಶಿಸಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನೇರ ಸಂದರ್ಶನವಿಮಾ ಪರಿಹಾರ ನೀಡದ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗೆ ದಂಡ ಆ.12 ರಂದು ಬಳ್ಳಾರಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಗುಣಮಟ್ಟದ ಜನಸೇವೆಗೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಕಟ್ಟುನಿಟ್ಟಿನ ಸೂಚನೆ