Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುಸ್ತಕಗಳಿಂದ ಭೌತಿಕ ಬೆಳವಣಿಗೆ: ಪ್ರೊ.ಮುನಿರಾಜು



ಬಳ್ಳಾರಿ,ಡಿ.20

ಪುಸ್ತಕಗಳು ಮನುಷ್ಯನ ಜ್ಞಾನ ವೃದ್ಧಿ ಮಾತ್ರವಲ್ಲದೆ, ಭೌತಿಕ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ ಮುನಿರಾಜು ಅವರು ಹೇಳಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ಪಠ್ಯದ ಭಾಗವಾದ ವಾಣಿಜ್ಯ ಸೌರಭ, ವಿಜ್ಞಾನ ಸೌರಭ ಮತ್ತು ಕಲಾ ಸೌರಭ ಎಂಬ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್ ಗೀಳನ್ನು ಬಿಟ್ಟು ಯುವಜನತೆ ಪುಸ್ತಕಗಳನ್ನು ಖರೀದಿಸಿ ಓದಬೇಕು ಆಗ ಮಾತ್ರ ಪುಸ್ತಕ ಪ್ರೀತಿ ಇಮ್ಮಡಿಗೊಳ್ಳುತ್ತದೆ ಎಂದು ತಿಳಿಸಿದರು.
ವಿವಿಯ ಕಲಾ ನಿಕಾಯದ ಡೀನರಾದ ಪ್ರೊ.ಶಾಂತನಾಯ್ಕ್ ಅವರು ಮಾತನಾಡಿ, ಮೌಲ್ಯಯುತ ಪುಸ್ತಕಗಳು ವಿದ್ಯಾರ್ಥಿಯ ಜೀವನವನ್ನು ಬದಲಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಎಲ್ಲ ಭಾಷೆಯ ಪುಸ್ತಕಗಳನ್ನು ಓದಿರಿ, ಆದರೆ ಕನ್ನಡ ಪುಸ್ತಕಗಳನ್ನು ಪ್ರೀತಿಸಿರಿ ಎಂದು ಹೇಳಿದರು.


ವಿವಿಯ ಪ್ರಸಾರಾಂಗ ನಿರ್ದೇಶಕ ಪ್ರೊ.ಅರುಣ್ ಕುಮಾರ್ ಲಗಶೆಟ್ಟಿ ಅವರು ಮಾತನಾಡಿ, ಪ್ರಸಾರಾಂಗ ದಿಂದ ಪ್ರಕಟಗೊಂಡಿರುವ ಬಳ್ಳಾರಿ ದರ್ಶನ ಪುಸ್ತಕವು ಹೆಚ್ಚು ಬೇಡಿಕೆಯಲ್ಲಿದ್ದು, ಪಠ್ಯಕ್ರಮದ ಪುಸ್ತಕಗಳನ್ನು ಹೆಚ್ಚಾಗಿ ಪ್ರಕಟಿಸಲು ಮುಂಬರುವ ದಿನಗಳಲ್ಲಿ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪುಸ್ತಕದ ಸಂಪಾದಕರಿಗೆ ಗೌರವಿಸಿ ಪುಸ್ತಕದ ಗೌರವ ಪ್ರತಿಗಳನ್ನು ನೀಡಲಾಯಿತು. ಈ ವೇಳೆ ಎಸ್‌ಎಸ್‌ಎ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೋನಿಕಾ ರಂಜನ್, ಡಾ.ಹೊನ್ನೂರ್ ಅಲಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ