Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಬಂದ ರಾಜಕೀಯ ನಾಯಕರು

ಕಾಂಗ್ರೆಸ್ನಾಯಕರನ್ನ ದೇವಸ್ಥಾನದ ಆನೆಗಳು ಮತ್ತು ವಾದ್ಯಘೋಷಗಳ ಸ್ವಾಗತಿಸಲಾಯಿತು. ಪುಣ್ಯಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ದೇವಸ್ಥಾನದ ಮುಖ್ಯದ್ವಾರದ ಬಳಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಬರಮಾಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ

ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ.

ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದು ತಿಳಿಸಿದರು.


Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ