ಕೊಪ್ಪಳ, ಅಕ್ಟೋಬರ್30: ಶಿಶಿಕ್ಷು ತರಬೇತಿ ಕುರಿತು ಜಿಲ್ಲಾ ಮಟ್ಟದ ಕೌಶಲ್ಯ ಸಮನ್ವಯ ಸಮಿತಿ ಸಭೆಯಲ್ಲಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಮಾಹಿತಿ, ಕಲಿಕೆ, ಸಂವಹನ) ಕುರಿತ ಪೋಸ್ಟರ್ ಗಳನ್ನು ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕ ಮಾರುತಿ ಕೆ., ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಪ್ಪಳ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಐ.ಟಿ.ಐ ಕಾಲೇಜುಗಳ ಪ್ರಾಂಶುಪಾಲರು ಮತ್ತಿತರರು ಉಪಸ್ಥಿತರಿದ್ದರು
Also read