Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕೊಪ್ಪಳ ಜೂನ್ 04ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30, 2026ರವರೆಗೆ ವಿಸ್ತರಿಸಲಾಗಿದೆ.
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು.
ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳು ನಿಗಮದ ಆನ್‌ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಅರ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಂತ ಮನೆ ಅಥವಾ ನಿವೇಶನ ಹೊಂದಿಲ್ಲ ಎಂಬುದಕ್ಕೆ ನ್ಯಾಯಾಲಯದ ಅಫಿಡವಿಟ್, ಬಾಡಿಗೆ ಮನೆಯಲ್ಲಿ ವಾಸವಾಗಿರುವುದನ್ನು ದೃಢೀಕರಿಸುವ ವಿದ್ಯುತ್ ಬಿಲ್ ಹಾಗೂ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸಬೇಕು.
ಅರ್ಹ ಫಲಾನುಭವಿಗಳು ಜೂನ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ಅವಧಿಯ ನಂತರ ಸಲ್ಲಿಸಲಾದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ