Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೈಟ್ ಕೊಡದ ಪೃಥ್ವಿ ಬಿಲ್ಡರಗೆ ದಂಡ ವಿಧಿಸಿ ಮತ್ತು ಪರಿಹಾರಕ್ಕೆ ಆಯೋಗ ಆದೇಶ

 

ಧಾರವಾಡ () ಮಾ.17: ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ ಹಾಗೂ ಡೆವಲಪರ್‍ನ ಪಾಲುದಾರರಾದ ಶಿವನಗೌಡ ಪಾಟೀಲ ಎಂಬುವವರು ತಡಸಿನಕೊಪ್ಪಾ ಗ್ರಾಮದಲ್ಲಿ ಅಭಿವೃದ್ಧಿಪಡಿಸುತ್ತಿದ್ದ ಲೇಔಟನಲ್ಲಿ, ಧಾರವಾಡದ ಮಾಳಮಡ್ಡಿಯ ಶ್ರೀನಿವಾಸ ಅಂಬೇಕರ್ ಎಂಬುವವರು ಸೈಟ್ ಪಡೆದುಕೊಳ್ಳಲು ಇಚ್ಚಿಸಿ ಪೃಥ್ವಿಡವಲಪರ್ಸ್ ಜೊತೆ ಪ್ಲಾಟ ನಂ.146 ಬಗ್ಗೆ ಮಾರಾಟದ ಒಪ್ಪಂದ ಮಾಡಿಕೊಂಡು, ಪ್ಲಾಟ್‍ಗೆ ಕಂತುಗಳ ಮುಖಾಂತರ ಪೂರ್ತಿ ಹಣ ರೂ.6,50,720 ರೂಪಾಯಿ ಹಣ ಸಂದಾಯ ಮಾಡಿದ್ದರು. ಸಾಕಷ್ಟು ಕಾಲಾವಕಾಶ ಕಳೆದರೂ ಬಿಲ್ಡರ ಲೇಔಟ್ ನಿರ್ಮಾಣ ಮಾಡದೇ, ತಮಗೆ ಬುಕ್ ಮಾಡಿದ ಸೈಟ್ ಕೊಡದೇ ಸೇವಾ ನೂನ್ಯತೆ ಎಸಗಿ ಮತ್ತು ಮೋಸ ಮಾಡಿದ್ದಾರೆ ಅಂತಾ ಹೇಳಿ ದೂರುದಾರರು ಬಿಲ್ಡರ್ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:19/08/2024 ರಂದು ಈ ದೂರನ್ನು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಪೂರ್ತಿ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲ್ಯಾಟುಗಳನ್ನು ಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಆಯೋಗ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ. ಈ ಬಗ್ಗೆ ಪೃಥ್ವಿ ಬಿಲ್ಡರ್ ಹಾಗೂ ಡೆವಲಪರ್‍ನ ಪಾಲುದಾರರಾದ ಶಿವನಗೌಡ ಪಾಟೀಲ ರವರು ದೂರುದಾರರಿಂದ ಪಡೆದ ಪೂರ್ತಿ ಹಣ ರೂ.6,50,720 ಕ್ಕೆ ಶೆ.10 ರಂತೆ ಹಣ ಸಂದಾಯವಾದ ದಿನಾಂಕದಿಂದ ಬಡ್ಡಿ ಲೆಕ್ಕ ಹಾಕಿ ಒಂದು ತಿಂಗಳ ಒಳಗಾಗಿ ಪೂರ್ತಿ ಹಣಕೊಡಲು ಆಯೋಗ ಆದೇಶಿಸಿದೆ. ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ತೊಂದರೆ ಹಾಗೂ ಅನಾನುಕೂಲತೆಗಾಗಿ ತಲಾ ರೂ.50,000 ಪರಿಹಾರ ಹಾಗೂ ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ಪೃಥ್ವಿ ಡವಲಪರ್ಸ್‍ಗೆ ನಿರ್ದೇಶಿಸಿದೆ.

***

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ