Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೌಶಲ್ಯಾಭಿವೃದ್ಧಿಗೆ ಉತ್ತೇಜನ: ರಾಜ್ಯದಲ್ಲಿ ಹೊಸ ಯೋಜನೆಗಳಿಗೆ ಚಾಲನೆ

ಬೆಂಗಳೂರು06: ಯುವಕರಿಗೆ ಉತ್ತಮ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ 2026-27ರ ಕರ್ನಾಟಕ ಬಜೆಟ್‌ನಲ್ಲಿ ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್‌ಡಿಎ ಮತ್ತು ಜೆಟಿಎಸ್‌ಗಳ ಮೂಲಭೂತ ಸೌಕರ್ಯ ಹಾಗೂ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ಐದು ವರ್ಷಗಳ ಅವಧಿಯಲ್ಲಿ ಒಟ್ಟು ರೂ.1,386 ಕೋಟಿ ವೆಚ್ಚದಲ್ಲಿ “K-QUEST” (ಕರ್ನಾಟಕ – ಕ್ವಾಲಿಟಿ ಅಪ್‌ಗ್ರಡೆಷನ್ ಫಾರ್ ಎಂಪ್ಲಾಯ್ಮೆಂಟ್ ಎಂಡ್ ಸ್ಕಿಲ್ ಟ್ರಾನ್ಸ್‌ಫಾರ್ಮೇಷನ್) ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ.
ಇದಲ್ಲದೆ, ಕೇಂದ್ರ ಸರ್ಕಾರದ PM-SETU ಯೋಜನೆ ಅಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ, ರಾಜ್ಯ ಮತ್ತು ಕೈಗಾರಿಕೆಗಳ ಸಹಭಾಗಿತ್ವದಲ್ಲಿ ಹಬ್ ಎಂಡ್ ಸ್ಪೋಕ್ ಮಾದರಿಯಲ್ಲಿ ಕ್ಲಸ್ಟರ್‌ಗಳಾಗಿ ಉನ್ನತೀಕರಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ರೂ.241 ಕೋಟಿ ವೆಚ್ಚದಲ್ಲಿ ಎರಡು ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಮತ್ತೊಂದು ಮಹತ್ವದ ಘೋಷಣೆಯಾಗಿ, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ ರೂ.16 ಕೋಟಿ ವೆಚ್ಚದಲ್ಲಿ Schneider Electric ಯೂತ್ ಇಂಪ್ಯಾಕ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಈ ಕೇಂದ್ರಗಳ ಮೂಲಕ ಪ್ರತಿ ವರ್ಷ ಒಟ್ಟು 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದ್ದು, ಉದ್ಯೋಗಾವಕಾಶ ಕಲ್ಪಿಸಲು ಸಹಾಯವಾಗಲಿದೆ.
ಈ ಕ್ರಮಗಳಿಂದ ರಾಜ್ಯದ ಯುವಕರಿಗೆ ನವೀನ ಕೌಶಲ್ಯ ತರಬೇತಿ ದೊರೆಯುವುದರೊಂದಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ