Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ





ಬಳ್ಳಾರಿ,ಡಿ.29

ಜಿಲ್ಲೆಯಲ್ಲಿ ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.8000 ರಂತೆ ಖರೀದಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಯಾಗಿದೆ.

*ಖರೀದಿ ಕೇಂದ್ರಗಳ ವಿವರ:*

ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಸ್ ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283).

ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722).

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ (ಮೊ.9449664453).

*ಬೇಕಾದ ದಾಖಲೆ:*

2025-26ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ, ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಗೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು. ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಪ್ರಕಟಣೆಗೊಂಡ 80 ದಿನಗಳೊಳಗೆ ನೋಂದಣಿ ಮಾಡಿಸಬೇಕು ಹಾಗೂ ನೋಂದಣಿ ಚೀಟಿ ಪಡೆದುಕೊಳ್ಳಬೇಕು.

ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಹಾಗೂ ಫ್ರೂಟ್ಸ್ ತಂತ್ರಾAಶದಲ್ಲಿ ಲಭ್ಯವಾಗುವ ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಷ್ಟು ತೊಗರಿ ಉತ್ಪನ್ನವನ್ನು 2026 ರ ಜನವರಿ 01 ರಿಂದ 90 ದಿನಗಳವರೆಗೆ ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.

ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗ ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ