Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಿಷ್ಠ ಬೆಂಬಲ ಯೋಜನೆಯಡಿ ಬಿಳಿ ಜೋಳ ಖರೀದಿ





ಬಳ್ಳಾರಿ,ಜ.16:

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾ0ಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ 2025-26 ನೇ ಸಾಲಿನ ಮುಂಗಾರು ಋತುವಿನ ಬಿಳಿಜೋಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

*ಬೆoಬಲ ಬೆಲೆ:*

ಬಿಳಿ ಜೋಳ-ಹೈಬ್ರೀಡ್ : ರೂ.3,699 (ಪ್ರತಿ ಕ್ವಿಂ)

ಬಿಳಿ ಜೋಳ-ಮಾಲ್ದಂಡಿ : ರೂ.3,749 (ಪ್ರತಿ ಕ್ವಿಂ)

*ಖರೀದಿ ಕೇಂದ್ರಗಳ ವಿವರ:*

ಬಳ್ಳಾರಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಬಳ್ಳಾರಿ ಮತ್ತು ಮೋಕಾ, ಅಸುಂಡಿ, ರೂಪನಗುಡಿ, ಅಮರಾಪುರ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕುರುಗೋಡು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು, ಕರೂರು, ಹಚ್ಚೋಳ್ಳಿ, ಬೂದುಗುಪ್ಪ, ಬಿ.ಎಂ.ಸೂಗೂರು, ತಾಳೂರು, ಮುದ್ದಟನೂರು, ಅರಳಿಗನೂರು, ಸಿರಿಗೇರಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ಕoಪ್ಲಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಕಂಪ್ಲಿ ಮತ್ತು ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.

ರೈತರು ಮೇಲ್ಕಂಡ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಇಲಾಖೆಯಿಂದ ಪಡೆದಿರುವ ಫ್ರೂಟ್ಸ್ ಐ.ಡಿ ಮತ್ತು ಆಧಾರ್ ನೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಬಿಳಿಜೋಳ /ಬೀಜೋತ್ಪಾದನೆ ಬೆಳೆಗಳನ್ನು ಬೆಳೆದಿದ್ದು, ಜೋಳವೆಂದು ನಮೂದಿಸಿಕೊಂಡು ಜೋಳ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿದಲ್ಲಿ ಅಥವಾ ಅಕ್ರಮ ಜೋಳ ನೋಂದಣಿ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ